Breaking News

ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಉಚಿತ ಕಣ್ಣಿನ ಪರೀಕ್ಷೆ ಮತ್ತು ಆರೋಗ್ಯ ತಪಾಸಣಾ ಶಿಬಿರ.

Retired employees felicitation ceremony and free eye examination and health check up camp.

ಜಾಹೀರಾತು

ತಿಪಟೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಿಪಟೂರು ತಾಲೂಕು ಘಟಕದ ವತಿಯಿಂದ ಇದೇ ಮಾರ್ಚ್, 1.3.2025ನೇ ಶನಿವಾರ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಉಚಿತ ಕಣ್ಣಿನ ಪರೀಕ್ಷೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಿಪಟೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್ ಈ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಜನಪ್ರಿಯ ಶಾಸಕರಾದ ಕೆ ಷಡಕ್ಷರಿ ಅವರು ಉದ್ಘಾಟಿಸಲಿದ್ದು
ನಿವೃತ್ತ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷ ಷಡಕ್ಷರಿ ಹಾಗೂ ಅಧ್ಯಕ್ಷ ಎನ್ ನರಸಿಂಹರಾಜು ಅವರು ಸನ್ಮಾನಿಸಲಿದ್ದಾರೆ ಹಾಗೂ
ಇದೇ ದಿನ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಾಗೂ ಶಂಕರ್ ಆಪ್ಟಿಕಲ್ಸ್ ತಿಪಟೂರು ಇವರಿಂದ ಉಚಿತ ಕಣ್ಣಿನ ಪರೀಕ್ಷೆಯನ್ನು ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ತಾಲೂಕಿನ ಎಲ್ಲಾ ಸರ್ಕಾರಿ ನೌಕರರು ಹಾಗೂ ನಿವೃತ್ತಿ ನೌಕರರು ಪಡೆಯಬೇಕು ಎಂದು ಇದೇ ವೇಳೆ ಅವರು ತಿಳಿಸಿದರು

About Mallikarjun

Check Also

ಜುಲೈ-೦೧ರಂದುಸಂಗಾಪುರದ ಐತಿಹಾಸಿಕ ಶ್ರೀ ಲಕ್ಷ್ಮಿ ನಾರಾಯಣ ಕೆರೆಯ ಒತ್ತುವರಿ ತೆರವುಗೊಳಿಸಲು ಸರ್ವೆ.

Survey to clear encroachment on historic Sri Lakshmi Narayana Lake in Singapore on July 1. …

Leave a Reply

Your email address will not be published. Required fields are marked *