A two-wheeler rider died after being hit by an unknown vehicle.

ವರದಿ : ಬಂಗಾರಪ್ಪ .ಸಿ
ಹನೂರು: ಪಟ್ಟಣದಿಂದ ಲೊಕ್ಕನಹಳ್ಳಿ ಮಾರ್ಗವಾಗಿ ಹಾದುಹೊಗುವ ಮುಖ್ಯ ರಸ್ತೆಯಲ್ಲಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನ ಸವಾರನಿಗೆ
ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹನೂರಿನಲ್ಲಿ ಜರುಗಿದೆ.
ಮೃತರ ವಿವರ :
ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಯ್ಯಲನತ್ತ ಗ್ರಾಮದ ಲಿಂಗರಾಜು (50) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಘಟನೆ ವಿವರ: ಈತ ಬೈಕ್ ನಲ್ಲಿ ತನ್ನ ಸ್ವಗ್ರಾಮದಿಂದ ಕಾರ್ಯನಿಮಿತ್ತ ಹನೂರಿಗೆ ಆಗಮಿಸುತ್ತಿದ್ದ ವೇಳೆ ಮುಂಭಾಗದಿಂದ ಬಂದಂತಹ ಅಪರಿಚಿತ ವಾಹನವೊಂದು ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆ ಹನೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಠಾಣೆಯಲ್ಲಿ ದೂರು ಮೃತರ ಪುತ್ರ ರಾಜೇಶ್ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.