Breaking News

ಅದ್ದೂರಿಯಾಗಿ ಜರುಗಿದ ಮಾದಪ್ಪನ ಯುಗಾದಿ ಜಾತ್ರೆ

Madappa’s Ugadi fair was held in grand style.

ಜಾಹೀರಾತು


ವರದಿ : ಬಂಗಾರಪ್ಪ .ಸಿ .
ಹನೂರು : ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲ ಭಾನುವಾರ 8-9 ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ನೆರವೇರಿತು. ಯುಗಾದಿ ರಥೋತ್ಸವಕ್ಕೆ ರಾಜ್ಯ ಅಷ್ಟೇ ಅಲ್ಲದೆ ತಮಿಳುನಾಡನಿಂದಲೂ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಹರಕೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.

ಯುಗಾದಿ ರಥೋತ್ಸವ ದೃಶ್ಯ
ಶ್ರೀ ಸಾಲೂರು ಬೃಹನ್​​ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಬೇಡಗಂಪಣ ಅರ್ಚಕರು ಹಾಗೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ಉತ್ಸವ ಮೂರ್ತಿ ಇರಿಸಿ ಬೂದು ಕುಂಬಳಕಾಯಿ ದೃಷ್ಟಿ ತೆಗೆದು ಮಹಾಮಂಗಳಾರತಿ ಹಾಗೂ ಬೇಡಗಂಪಣ ಸಮುದಾಯದ ಹೆಣ್ಣು ಮಕ್ಕಳಿಂದ ಬೆಲ್ಲದ ಆರತಿ ಬೆಳಗಿದ ಬಳಿಕವಷ್ಟೇ ಮಹಾ ರಥೋತ್ಸವ ಆರಂಭಗೊಂಡಿತು.
ಬೆಲ್ಲದ ಆರತಿ ಬೆಳಗಿದ ಬಳಿಕ ಆರಂಭಗೊಂಡ ಮಹಾರಥೋತ್ಸವ
ದೇಗುಲದ ಮುಖ್ಯದ್ವಾರದ ಆವರಣದಿಂದ ಸತ್ತಿಗೆ ಸೂರಿಪಾನಿ, ಛತ್ರಿ, ಚಾಮರ, ನಂದಿಧ್ವಜ ಹಾಗೂ ಮಂಗಳವಾದ್ಯದೊಂದಿಗೆ ತೇರು ಎಳೆಯಲಾಯಿತು. ಹುಲಿವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನೋತ್ಸವವು ನಡೆಯಿತು. ವೀರಗಾಸೆ ಕುಣಿತ ಭಕ್ತಾದಿಗಳ ಗಮನ ಸೆಳೆಯಿತು. ಭಕ್ತರು ತೇರಿಗೆ ಹಣ್ಣು, ದವಸ ಧಾನ್ಯಗಳನ್ನು ಎಸೆದು ಮಾದಪ್ಪನ ಕೃಪೆಗೆ ಪಾತ್ರರಾದರು.
ಸಹಸ್ರಾರು ಭಕ್ತರು ಭಾಗಿ
ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಜಾತ್ರೆಗೆ ಸಹಸ್ರಾರು ಮಂದಿ ಭಕ್ತರು ಪಾದಯಾತ್ರೆ ಮೂಲಕ ಕ್ಷೇತ್ರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಪ್ರಾಧಿಕಾರದ ವತಿಯಿಂದ ನಿರಂತರ ಪ್ರಸಾದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಸೇರಿ ಮೂಲಸೌಕರ್ಯ ಕಲ್ಪಿಸಲಾಗಿತ್ತು. ಜೊತೆಗೆ, ಯಾವುದೇ ಅಹಿತಕರ ಘಟನೆ ಆಗದಂತೆ ಜಿಲ್ಲಾ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಿತ್ತು ,ಪ್ರಾಧಿಕಾರದ ಸಿಬ್ಬಂದಿಗಳು ಮಾದಪ್ಪನ ಜಾತ್ರೆಯು ಯಶಸ್ವಿಯಾಗಿ ನಡೆಯುವಂತೆ ಕಾರ್ಯನಿರ್ವಹಿಸಿದರು ನಿರ್ವಹಿಸಿದರು

About Mallikarjun

Check Also

ರಾಯಚೂರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ ಅಧಿಕಾರ ಸ್ವೀಕಾರ

Raichur district's new Zilla Panchayat CEO Ishwar Kumar Kandu assumes office ರಾಯಚೂರ ಜುಲೈ 9 (ಕ.ವಾ.): …

Leave a Reply

Your email address will not be published. Required fields are marked *