Stop guarantee committee honorarium: KRS Ganesh
ಗಂಗಾವತಿ: ನಾಡಿನ ಜನತೆಯ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಕರ್ನಾಟಕ ಸರಕಾರ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಆದರೆ ಅನುಷ್ಠಾನಕ್ಕಾಗಿ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಿ ಸರಕಾರದಿಂದ ಕೊಡುತ್ತಿರುವ ಗೌರವಧನ ಇತರೆ ಭತ್ಯೆ ಕೂಡಲೆ ರದ್ದು ಮಾಡಿ ಬೊಕ್ಕಸದ ಭಾರ ಕಡಿಮೆ ಮಾಡಬೇಕೆಂದು ಕೆಆರ್‌ಎಸ್ ಪಕ್ಷದ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಗಣೇಶ್ ಅಮೃತ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಸಾಕಷ್ಟು ಹೊರೆಯಾಗಿದೆ, ಗಾಯದ ಮೇಲೆ ಬರೆ ಎಳೆದಂತೆ ಬೆಲೆ ಏರಿಕೆ, ಸೇವಾ ಶುಲ್ಕಗಳಲ್ಲಿ ಹೆಚ್ಚಳ ನಾಡಿನ ಜನತೆ ತತ್ತರಗೊಂಡಿದ್ದಾರೆ. ಸರಕಾರದಿಂದ ಅಭಿವೃದ್ಧಿ ಯೋಜನೆಗಳಿಗೆ ಬಿಡಿಗಾಸು ಬಿಡುಗಡೆಗೊಳ್ಳುತ್ತಿಲ್ಲ, ಬರಿದಾಗಿದೆ ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಅದರಲ್ಲಿ ಗೌರವಧನದ ಹೊರೆ ಬೇರೆ, ಅದಕ್ಕಾಗಿ ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳಿಗೆ ಸಂಬಳ ನೀಡುವುದನ್ನು ನಿಲ್ಲಿಸಿ, ಸೇವೆಯ ಅಗತ್ಯವಿದ್ದಲ್ಲಿ ಕೆಆರ್‌ಎಸ್ ಪಕ್ಷದ ಸರ್ವ ಸದಸ್ಯರು ಉಚಿತವಾಗಿ ದುಡಿಯಲು ಸಿದ್ದರಿದ್ದು, ಸಿಎಂ ಸಿದ್ದರಾಮಯ್ಯ ಅವರು ನಮ್ಮ ಅಗ್ರಹವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಗಣೇಶ್ ಮನವಿ ಮಾಡಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…