Breaking News

ಹಂಪಸದುರ್ಗಾ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ

Inspection of Hampasadurga lake dredging work

ಜಾಹೀರಾತು

ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಹೇಳಿಕೆ

ಗಂಗಾವತಿ : ತಾಲೂಕಿನ ಮರಳಿ ಗ್ರಾ.ಪಂ. ವ್ಯಾಪ್ತಿಯ ನರೇಗಾ ಕೂಲಿಕಾರರು ನಿರ್ವಹಿಸುತ್ತಿರುವ ಹಂಪಸದುರ್ಗಾ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಅವರು ಮಾತನಾಡಿ,’ ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಬೇಕು. ಗ್ರಾಪಂ ಸಿಬ್ಬಂದಿಗಳು NMMS ಹಾಜರಾತಿ ಪಾರದರ್ಶಕವಾಗಿ ಹಾಕಬೇಕು. ಕೆರೆ ಹೂಳೆತ್ತಿದರೆ ಅಂತರ್ಜಲ ವೃದ್ಧಿಗೆ ಸಹಕಾರಿಯಾಗುತ್ತದೆ. ಇದರಿಂದ ರೈತರ ಜಮೀನುಗಳಲ್ಲಿರುವ ಬೋರ್ ವೆಲ್ ರಿಚಾರ್ಜ್ ಕೂಡ ಆಗುತ್ತವೆ ಎಂದರು.

ಉದ್ಯೋಗ ಖಾತರಿ ಯೋಜನೆ ಕೂಲಿ ಮೊತ್ತ 2025 ಏ.1ರಿಂದ 349 ರಿಂದ 370 ರೂ.ಗೆ ಹೆಚ್ಚಳವಾಗಿದೆ. ಕೂಲಿಕಾರರು ಗ್ರಾಪಂಗೆ ಕೆಲಸದ ಬೇಡಿಕೆ ಸಲ್ಲಿಸಿ, ಕೆಲಸ ಪಡೆಯಬೇಕು. ಉದ್ಯೋಗ ಖಾತರಿ ಯೋಜನೆಯಡಿ ವರ್ಷಕ್ಕೆ 100 ಮಾನವ ದಿನಗಳ ಕೆಲಸ ಮಾಡಲು ಅವಕಾಶವಿದ್ದು, ಎಲ್ಲರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ವೇಳೆ ತಾಲೂಕು ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ತಾಂತ್ರಿಕ ಸಂಯೋಜಕರಾದ ಬಸವರಾಜ ಜಟಗಿ, ಗ್ರಾಮ ಕಾಯಕ ಮಿತ್ರರಾದ ನಾಗಮ್ಮ, ಕಾಯಕಬಂಧುಗಳು ಇದ್ದರು.

About Mallikarjun

Check Also

ಸಿಎಂ ಸಿದ್ಧರಾಮಯ್ಯಗೆ ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಲುಜಿ.ಎಂ.ರಾಜಶೇಖರ್ ಒತ್ತಾಯ.

G.M. Rajashekhar urges CM Siddaramaiah to provide facilities to real journalists in rural areas. ಬೇಂಗಳೂರು: …

Leave a Reply

Your email address will not be published. Required fields are marked *