Breaking News

ಸಚಿವ ಸಂಪುಟದ ನಡೆಯುವ ಸ್ಥಳ ವೀಕ್ಷಣೆ ಮಾಡಿದ ಶಾಸಕ ಎಮ್ ಆರ್ ಮಂಜುನಾಥ್ ಮತ್ತು ಅಧಿಕಾರಿಗಳು

MLA MR Manjunath and officials inspected the venue of the cabinet meeting.

ಜಾಹೀರಾತು
Screenshot 2025 04 18 19 00 25 21 6012fa4d4ddec268fc5c7112cbb265e7


ವರದಿ:ಬಂಗಾರಪ್ಪ .ಸಿ .
ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ
ಮಾದಪ್ಪನ ಸನ್ನಿಧಿಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಂತೋಷದ ವಿಚಾರ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರುಗಳು ಮತ್ತು ಶಾಸಕರು ಹಿರಿಯ ಅಧಿಕಾರಿಗಳು ಭಾಗವಹಿಸುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ನೀಲಾ ನಕ್ಷ ತಯಾರಿಸಿ ಅನುಮೋದನೆಗೆ ನೀಡಲಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ತಿಂಗಳು ಏಪ್ರಿಲ್ 24ರಂದು ನಡೆಯಲಿರುವ ಸಚಿವ ಸಂಪುಟ ಸಭೆ ಹಿನ್ನೆಲೆ ಸಿದ್ಧತೆಗಳ ಬಗ್ಗೆ ಪೂರ್ವ ಪ್ರಯೋಗ ಕಾರ್ಯಕ್ರಮಗಳ ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು
ಕೋಟ್ಯಂತರ ಭಕ್ತರ ಆರಾಧ್ಯ ದೈವ ಮಾದಪ್ಪನ ಸನ್ನಿಧಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಸಂತಸ ತಂದಿದೆ ಜೊತೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಲ್ಲಾ ಸಚಿವರು ಶಾಸಕರು ಮತ್ತು ಹಿರಿಯ ಅಧಿಕಾರಿಗಳು ಈ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷ ತಯಾರಿಸಿ ಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಸಂಬಂಧಪಟ್ಟ ಇಲಾಖೆ ಸಚಿವರುಗಳಿಗೆ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಇಡೀ ಕ್ಷೇತ್ರದ ಸಮಗ್ರ ಚಿತ್ರಣದ ಬಗ್ಗೆ ಮನವಿ ಮಾಡಲಾಗಿದೆ,
ಕ್ಷೇತ್ರದ ಅಭಿವೃದ್ಧಿಯ ಭರವಸೆ : ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಕ್ಷೇತ್ರದ ಪ್ರಮುಖ ಅಭಿವೃದ್ಧಿ ಕಾಮಗಾರಿಗಳಾದ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ರಸ್ತೆಗಳ ಅಭಿವೃದ್ಧಿ ನೀರಾವರಿ ಸಂಬಂಧಿಸಿದಂತೆ ಪ್ರವಾಸೋದ್ಯಮ ಸೇರಿದಂತೆ ರೈತರಿಗೆ ಪ್ರಮುಖವಾಗಿ ನೀರಾವರಿ ವಿದ್ಯುತ್ ಮತ್ತು ರಸ್ತೆಗಳ ಅಭಿವೃದ್ಧಿಗೆ ಗೊತ್ತು ನೀಡಲಾಗಿದ್ದು ಬರುವಂತ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳ ಬಳಿ ಹಾಗೂ ಸಚಿವರುಗಳ ಬಳಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು ಈ ಭಾಗದ ಜನತೆಯ ಪ್ರಮುಖವಾಗಿ ಮಲೆ ಮಾದೇಶ್ವರ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳ ಅಭಿವೃದ್ಧಿಗೂ ಸಹ ಒತ್ತು ನೀಡಲು ಕ್ಯಾಬಿನೆಟ್ ಸವಿಯಲ್ಲಿ ವಿಶೇಷ ಪ್ಯಾಕೇಜ್ ನೀಡುವ ಭರವಸೆ ಇದೆ ಎಂದು ತಿಳಿಸಿದರು.

ಹಲವು ನೂತನ ಕಟ್ಟಡಗಳನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಉದ್ಘಾಟನೆ : ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳಾದ ದೊಡ್ಡಕೆರೆ ಅಭಿರುದ್ದಿ ಜೊತೆಗೆ ಯುಜಿಡಿ ಸೇರಿದಂತೆ 376 ಕೊಟ್ಟಡಿಗಳ ಉದ್ಘಾಟನೆ ಸೇರಿದಂತೆ ಸೋಲಾರ್ ಮತ್ತು ನಾಲ್ಕು ಸಾವಿರ ಜನ ಒಂದೇ ಸ್ಥಳದಲ್ಲಿ ಕುಳಿತು ದಾಸೋಹ ಮಾಡಲು ಶಂಕುಸ್ಥಾಪನೆ ಸಹ ಪ್ರಮುಖವಾಗಿ ನಡೆಯಲಿದೆ ಉಳಿದಂತ ಮಲೆ ಮಹದೇಶ್ವರ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಏನು 15ರಿಂದ 20 ವರ್ಷಗಳ ಕಾಲ ಕುಂಠಿತಗೊಂಡಿದ್ದು ಈ ಭಾಗದ ಜನಗಳ ಆಶಯದಂತೆ ಕ್ಯಾಬಿನೆಟ್ ಸಭೆಯಲ್ಲಿ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಹನೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಗೆ ವಿಶೇಷ ಪ್ರಾಧಿನಿತ್ಯ ನೀಡುವ ಭರವಸೆಯನ್ನು ನೀಡಿದರು..
ಜಿಲ್ಲಾಧಿಕಾರಿ ಶಿಲ್ಪನಾಗ್ ಮಾತನಾಡಿ : ಮಲೆ ಮಾದೇಶ್ವರ ಬೆಟ್ಟ ಶ್ರೀ ಕ್ಷೇತ್ರದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಈ ಭಾಗದ ಸಮಗ್ರ ಅಭಿವೃದ್ಧಿಗೆ ಜೊತೆಗೆ ಮುಖ್ಯಮಂತ್ರಿಗಳು ಸಹ ಚಾಮರಾಜನಗರ ಜಿಲ್ಲೆಗೆ ಏಳು ಬಾರಿ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಸಹ ಪರಿಶೀಲಿಸಿದ್ದಾರೆ ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ಚೆಲುವ ಚಾಮರಾಜನಗರ ಎನ್ನುವ ನಿಟ್ಟಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಮತ್ತು ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಮತ್ತು ಜನಸಾಮಾನ್ಯರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಜಿಲ್ಲೆಗೆ ಮತ್ತು ಡಿವಿಷನ್ ಗೆ ಪೂರಕವಾಗಿದೆ ಹೀಗಾಗಿ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಸೇರಿದಂತೆ ಇಡೀ ಕ್ಯಾಬಿನೆಟ್ ದರ್ಜೆಯ ಸಚಿವರುಗಳು ಸಹ ಈ ಸಭೆಯಲ್ಲಿ ಭಾಗವಹಿಸುತ್ತಿರುವುದು ಸಂಬಂಧಪಟ್ಟ ಇಲಾಖೆ ಹಿರಿಯ ಅಧಿಕಾರಿಗಳು ಸಹ ಭಾಗವಹಿಸುತ್ತಿರುವುದರಿಂದ ಈಗಾಗಲೇ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತು ಹನೂರು ತಾಲೂಕಿನ ಜಲತ್ವ ಸಮಸ್ಯೆಗಳಿಗೆ ಪೂರಕವಾಗಿ ಪ್ರಸ್ತಾವನೆಯನ್ನು ಸಹ ಸಲ್ಲಿಸಲಾಗಿದೆ ಹೀಗಾಗಿ 24ರಂದು ನಡೆಯುವ ಕ್ಯಾಬಿನೆಟ್ ಸಭೆ ಮುನ್ನ ಸಚಿವ ಸಂಪುಟ ಸಿದ್ಧತೆಗಳು ಹಾಗೂ ಪೂರ್ವ ಪ್ರಯೋಗ ಕಾರ್ಯಕ್ರಮಗಳ ಬಗ್ಗೆ ಸಮಿತಿ ರಚನೆ ಮಾಡಿ ಇಡೀ ಜಿಲ್ಲೆಯ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಸಹ ಇಂದು ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾರೆ ಹೀಗಾಗಿ ಸಚಿವ ಸಂಪುಟ ಸಭೆ ನಡೆಯಲು ಬೇಕಾದ ಸಕಲ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಶ್ರೀ ಕ್ಷೇತ್ರದಲ್ಲೂ ಸಹ ಯಾವುದೇ ಲೋಪದೋಷಗಳು ಬರದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಯಾ ಇಲಾಖೆಗೆ ಸೂಚನೆ ಸಹ ನೀಡಲಾಗಿತ್ತು ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಗಳು ಸಹ ನಡೆಯುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಟಿ ಕವಿತಾ,ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದರ್, ಕೆಎಸ್ಆರ್ಟಿಸಿ ಡಿಸಿ ಅಶೋಕ್,ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮಿ, ಸೇರಿದಂತೆ ಚಾಮರಾಜನಗರ ಜಿಲ್ಲೆಯ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

About Mallikarjun

Check Also

ನವೆಂಬರ್ 1 ರಂದು ಜಿಲ್ಲಾ ಕೇಂದ್ರದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

70th Karnataka Rajyotsava Day celebrated at the district headquarters on November 1 ಕೊಪ್ಪಳ ಅಕ್ಟೋಬರ್ 28 …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.