A humanitarian KSRTC conductor Munimadshetty.

ವರದಿ : ಬಂಗಾರಪ್ಪ .ಸಿ .
ಹನೂರು /ಕೊಳ್ಳೆಗಾಲ ; ಗರ್ಬಿಣಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಆಂಬ್ಯುಲೆನ್ಸ್ ಗೆ ಕರೆ ಮಾಡಿ ಗರ್ಭಿಣಿಗೆ ನೆರವು ಮಾಡಿದ ನಿರ್ವಹಕರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡು ನರಳುತ್ತಿದ್ದ ತುಂಬು ಗರ್ಭಿಣಿಯೊಬ್ಬಳನ್ನು ಬಸ್ ನಿರ್ವಾಹಕ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ. ಶನಿವಾರ ಸಂಜೆ 7.30ರ ಸಂದರ್ಭದಲ್ಲಿ ಚಿಕ್ಕಲೂರು ನಿಂದ ಕೊಳ್ಳೇಗಾಲ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಕೊತ್ತನೂರು ಗ್ರಾಮದಲ್ಲಿ ತುಂಬು ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳಲು ಬಸ್ ಹತ್ತಿದ್ದರು. ಮಾರ್ಗ ಮಧ್ಯೆ ಹೊಟ್ಟೆ ನೋವು ಹೆಚ್ಚಾಗಿ ನರಳುತ್ತಿದ್ದರು. ಇದನ್ನು ಗಮನಿಸಿದ ಕಂಡಕ್ಟರ್ ಮುನಿ ಮಾದಶೆಟ್ಟಿ ಆಂಬ್ಯುಲೆನ್ಸ್ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಆಂಬ್ಯುಲೆನ್ಸ್‌ನಲ್ಲಿ ಮಹಿಳೆಯನ್ನು ಕಳುಹಿಸಿದ್ದು ಇವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ