Former minister Iqbal Ansari will be the candidate if mid-term elections are held: Vishwanath Malipatil.
ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದದ್ದೇ ಆದರೆ ಕಾಂಗ್ರೆಸ್ ಪಕ್ಷದಿಂದ ನಮ್ಮ ನಾಯಕರಾದ ಇಕ್ಬಾಲ್ ಅನ್ಸಾರಿ ಅವರೇ ಅಭ್ಯರ್ಥಿ ಆಗಲಿದ್ದು, ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಆರಾಧನಾ ಸಮಿತಿ ಸದಸ್ಯರು ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಹಾಗೂ ಸಹಕಾರಿ ಧುರೀಣರಾದ ವಿಶ್ವನಾಥ್ ಮಾಲಿಪಾಟೀಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರ ಮೇಲೆ ಹೆಚ್ಚಿನ ಜನರ ಒಲವಿದೆ, ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ, ಹಿರಿಯ ನಾಯಕರಾದ ಬಸವರಾಜ ರಾಯರೆಡ್ಡಿ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಮರೇಗೌಡ ಬಯ್ಯಾಪುರ, ಕೊಪ್ಪಳದ ಸಂಸದರಾದ ರಾಜಶೇಖರ್ ಹಿಟ್ನಾಳ, ಶಾಸಕರಾದ ರಾಘವೇಂದ್ರ ಹಿಟ್ನಾಳರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯಗಳನ್ನು ಹೊಂದಿರುವುದಿಲ್ಲ. ಮಾಧ್ಯಮಗಳಲ್ಲಿ ಬಂದ ವರದಿ ಊಹಾ ಪೋಹಗಳಿಂದ ಕೂಡಿದ್ದು, ಕೇವಲ ಗಾಳಿ ಸುದ್ದಿಯಾಗಿದೆ. ಚುನಾವಣೆ ಎಂದರೆ ಆಕಾಂಕ್ಷಿಗಳು ಇರುವುದು ಸಹಜ. ಆದರೆ ಅನ್ಸಾರಿಯವರು ಕ್ಷೇತ್ರದ ಪ್ರತಿಯೊಬ್ಬರ ನಾಡಿಮಿಡಿತವನ್ನು ಅರಿತವರಾಗಿದ್ದಾರೆ. ಗಂಗಾವತಿಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇ ಆದ ದೃಷ್ಟಿಕೋನವನ್ನು ಹೊಂದಿದ್ದು, ಸರ್ವರನ್ನು ಸಮನಾಗಿ ಕಾಣುವ ವ್ಯಕ್ತಿತ್ವ ಹೊಂದಿರುವ ಇಕ್ಬಾಲ್ ಅನ್ಸಾರಿ ಯವರೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…