Progressive Building and Other Construction Workers’ Meeting Condemns Central Government’s Anti-Labor Policy

ಗಂಗಾವತಿ: ಮೇ-೧೧ ಭಾನುವಾರದಂದು ನಗರದ ೫ನೇ ವಾರ್ಡ್ನ ವೆಂಕಟರಮಣ ಗುಡಿಯ ಹತ್ತಿರ ಪ್ರಗತಿಪರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಭೆಯು ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಅಧ್ಯಕ್ಷರಾದ ಕಾ|| ವಿಜಯ ದೊರೆರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕರನ್ನು ಅವರ ಮೂಲಭೂತ ಹಕ್ಕುಗಳಿಂದ ವಂಚಿಸುತ್ತಿದ್ದಾರೆ. ಕಾರ್ಮಿಕರು ತಮ್ಮ ಮೂಲಭೂತ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಬೇಕು. ಇದೇ ತಿಂಗಳು ೨೦ ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ತಾವೆಲ್ಲರೂ ಭಾಗವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಕಾ|| ಅಬ್ದುಲ್ ಅವರು ಮಾತನಾಡಿ ಸರ್ಕಾರವು ಕಟ್ಟಡ ಮತ್ತು ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಬೇಕಾದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡದೆ, ಕೇವಲ ಕಿಟ್‌ಗಳನ್ನು ಕೊಡುವ ಮೂಲಕ ಕಾರ್ಮಿಕರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ನಾವುಗಳು ಎಚ್ಚೆತ್ತುಕೊಂಡು ನಮಗೆ ಮತ್ತು ನಮ್ಮ ಮಕ್ಕಳ ಭವಿಷ್ಯಕ್ಕೆ ಬೇಕಾಗುವ ಮೂಲಭೂತ ಸೌಲಭ್ಯಗಳಿಗಾಗಿ ಹೋರಾಟ ಮಾಡಬೇಕಿದೆ, ಸರ್ಕಾರ ಈ ಕಿಟ್ ಕೊಡುವ ದಂದೆಗಳನ್ನು ನಿಲ್ಲಿಸಬೇಕು ಎಂದರು.
ಕಾ|| ಬಾಬರ್ ಮಾತನಾಡಿ ಕಾರ್ಮಿಕರ ಮಕ್ಕಳಿಗೆ ಈ ಹಿಂದೆ ಇದ್ದ ಸ್ಕಾಲರ್‌ಶಿಪ್ ಮೊತ್ತವನ್ನು ಕಡಿಮೆ ಮಾಡಿದ್ದಾರೆ. ಇದರಿಂದ ಕಾರ್ಮಿಕರ ಮಕ್ಕಳು ವಿದ್ಯೆಯಿಂದ ವಂಚಿತರಾಗುತ್ತಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸಿ ಕಾರ್ಮಿಕರ ಮಕ್ಕಳು ವಿದ್ಯೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು.
ಕಾ|| ರಮೇಶ್ ಮಾತನಾಡಿ ಕೇಂದ್ರ ಸರ್ಕಾರ ಕಾರ್ಮಿಕರ ೪೪ ಕಾಯ್ದೆಗಳನ್ನು ತೆಗೆದು ಕೇವಲ ನಾಲ್ಕು ಸಂಹಿತೆಗಳನ್ನಾಗಿ ಮಾಡಿ ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿವೆ. ಇದರ ವಿರುದ್ಧ ಕಾರ್ಮಿಕರೆಲ್ಲ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದರು.
ಈ ಸಂದರ್ಭದಲ್ಲಿ ಕೃಷ್ಣ, ಸ್ವಾಮಿ, ಖಾಸಿಂ, ಮೈಬು ಹಾಗೂ ಗಂಗಾವತಿ ಮತ್ತು ಕಾರಟಗಿ ನಗರದ ಹಲವಾರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಇದ್ದರು.