District in-charge minister should come forward to repair roads in Gangavathi constituency: Bharadwaj

ಗಂಗಾವತಿ: ಗಂಗಾವತಿ ಕ್ಷೇತ್ರದಾದ್ಯಂತ ರಸ್ತೆಗಳು ತುಂಬಾ ಕೆಟ್ಟುಹೋಗಿದ್ದು, ಸಾರ್ವಜನಿಕರು ಸಂಚಾರಕ್ಕೆ ಪರದಾಡುವಂತಾಗಿದೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಕ್ಷೇತ್ರದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಮುಂ ದಾಗ ಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಆಗ್ರಹಿಸಿದರು.
ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿರುವುದಕ್ಕೆ ಕರ್ನಾಟಕ ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಗಂಗಾವತಿ ಕ್ಷೇತ್ರ ಅನಾಥವಾಗಿದೆ. ಕ್ಷೇತ್ರವು ಅಭಿವೃದ್ಧಿಯಲ್ಲಿ ಶೂನ್ಯವಾಗಿದೆ.
ಈ ವರ್ಷದ ಮುಂಗಾರು ಮಳೆಯು ಅಧಿಕವಾಗಿರುವುದರಿಂದ ತುರ್ತಾಗಿ ರಸ್ತೆಗಳನ್ನು ಸರಿಪಡಿಸಬೇಕಾಗಿದೆ. ಇಲ್ಲದಿದ್ದರೆ ರಸ್ತೆಗಳ ಗುಂಡಿಗಳಲ್ಲಿ ನೀರು ನಿಂತು ಸಾರ್ವಜನಿಕರ ವಾಹನಗಳು ಅಪಘಾತಕ್ಕೀಡಾಗಿ ಸಾವುನೋವುಗಳು ಸಂಭವಿಸುವ ಭೀತಿ ಇರುತ್ತದೆ. ಕೂಡಲೇ ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡು ತ್ವರಿತಗತಿಯಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಮುಂದಾಗಬೇಕೆAದು ಕ್ರಾಂತಿಚಕ್ರ ಬಳಗ ಒತ್ತಾಯಿಸದೆ ಎಂದು ತಿಳಿಸಿದರು.