When will Indira Canteen be inaugurated in Kotturu?

“ಕಡು ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಜನಪ್ರತಿನಿಧಿಗಳು, ಅಧಿಕಾರಿಗಳ
ನಿರ್ಲಕ್ಷಿತ ಗೆ ಸಾಕ್ಷಿ ಅಗಿದೆ “
” ಈಗಿನ ರಾಜ್ಯ ಸರ್ಕಾರ ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕಾಗಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತಂದಿದ್ದು, ಇದರಿಂದ ಬಡವರಿಗೆ, ಕಾರ್ಮಿಕರಿಗೆ ಅನುಕೂಲವಾಗುತ್ತದೆ ಇಲ್ಲವೇ ಎಂದು ಕಾದು ನೋಡಬೇಕಿದೆ “
ಕೊಟ್ಟೂರು: ಐದು ಗ್ಯಾರಂಟಿಗಳನ್ನು ನೀಡುತ್ತೇವೆಂಬ ಭರವಸೆಯ ಮೇರೆಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೊಟ್ಟೂರಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದಿರಾ ಕ್ಯಾಂಟಿನ್ ಸ್ಥಾಪಿಸಲು ಎಲ್ಲ ರೀತಿಯ ತಯಾರಿ ನಡೆಸಿ, ಕಟ್ಟಡವೂ ಉದ್ಘಾಟನೆಗೆ ಸಿದ್ಧವಾಗಿದ್ದು, ಇದುವರೆಗೂ ಸಾರ್ವಜನಿಕ ಸೇವೆಗೆ ಲಭ್ಯವಾಗಿಲ್ಲದಿರುವುದು ಬೇಸರದ ಸಂಗತಿಯಾಗಿದೆ. ಬಡವರ, ಕೂಲಿ ಕಾರ್ಮಿಕರ ಅಕ್ಷಯ ಪಾತ್ರೆಯೆಂದೆ ಹೆಸರು ಮಾಡಿರುವ ಇಂದಿರಾ ಕ್ಯಾಂಟೀನ್ ಕೊಟ್ಟೂರಿನಲ್ಲಿ ಅತೀ ತುರ್ತಾಗಿ ಪ್ರಾರಂಭವಾಗಬೇಕೆಂಬುದು ಈ ಭಾಗದ ಜನರ ನಿರೀಕ್ಷೆಯಾಗಿದೆ. ಬಡವರ ಹಸಿವನ್ನು ನೀಗಸಬೇಕಾಗಿತ್ತು .ಆದರೆ, ಬಿಡುಗಡೆಯ ಭಾಗ್ಯ ಯಾವಾಗ? ಎಂದು ಜನರು ಮಾತಾಡಿಕೊಳ್ಳುತ್ತಿದ್ದಾರೆ.
ಶೀಘ್ರವಾಗಿ ಈ ಇಂದಿರಾ ಕ್ಯಾಂಟೀನ್ ಆರಂಭಗೊಂಡರೇ ನಿತ್ಯ ಕೂಲಿ ಕಾರ್ಮಿಕರಿಗೆ , ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ, ಕೆಲಸ, ಕಾರ್ಯಗಳಿಗೆ ಬರುವ ಗ್ರಾಮೀಣ ಪ್ರದೇಶದ ಜನರಿಗೂ ಇದರಿಂದ ಹಸಿವನ್ನು ನೀಗಿಸಲು ಪ್ರಯತ್ನಿಸುವರೇ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆರೇ ಎಂದು ಸ್ಥಳೀಯ ಸಾರ್ವಜನಿಕರಾದ ರಮೇಶ್, ಮಂಜುನಾಥ್, ಅಂಜನಿ, ಪ್ರವೀಣ್ ಕುಮಾರ್ ಪತ್ರಿಕೆ ತಿಳಿಸಿದರು.