ಕಲ್ಯಾಣಸಿರಿ ವಿಶೇಷ

ಗ್ರಾಮಗಳ ಅಭಿವೃದ್ಧಿಗೆ ಸದಾ ಶ್ರಮಿಸುವೆ ಸಾರ್ವಜನಿಕರಿಗೆ ಶಾಸಕ ಎಂ.ಆರ್.ಮಂಜುನಾಥ್ ಭರವಸೆ

MLA M.R. Manjunath assures the public that he will always work for the development of villages.


ವರದಿ: ಬಂಗಾರಪ್ಪ .ಸಿ .
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ
ಚನ್ನಾಲಿಂಗನಹಳ್ಳಿ ಮತ್ತು ಕಣ್ಣೂರು ಗ್ರಾಮಗಳಲ್ಲಿ ಸುಮಾರು ಅಂದಾಜು ಎರಡು ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಒಳ ಚರಂಡಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಗ್ರಾಮಗಳ ಅಭಿವೃದ್ಧಿ ಸದಾ ಸಿದ್ದ ಎಂದು ಶಾಸಕರಾದ ಎಮ್ ಆರ್ ಮಂಜುನಾಥ್ ತಿಳಿಸಿದರು.
ಹನೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೆರಿಸಿದ ನಂತರ ಮಾತನಾಡಿದ ಅವರು
2024 – 25 ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಕಾಲೋನಿ ಯೋಜನೆ ಅಡಿಯಲ್ಲಿ ಸುಮಾರು 2 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ 1.50 ಕೋಟಿ ಚೆನ್ನಾಲಿಂಗನಹಳ್ಳಿ ಹಾಗೂ 50 ಲಕ್ಷ ಕಣ್ಣೂರು ಗ್ರಾಮಗಳಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ಇಂದು ಭೂಮಿ ಪೂಜೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಇತರೆ ಗ್ರಾಮಗಳ ಅಬಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡಲಾಗುವುದು.
ಗುತ್ತಿಗೆದಾರರಿಗೆ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಯು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದ ವಿಚಾರದಲ್ಲಿ ನನ್ನ ಜೊತೆ ಯಾವುದೇ ರಾಜಿ ಇಲ್ಲ. ಸ್ಥಳೀಯ ಮುಖಂಡರ ವಿಶ್ವಾಸದೊಂದಿಗೆ ಪ್ರತಿ ಹಂತದ ಕಾಮಗಾರಿಯ ಪ್ರಗತಿಯನ್ನು ನನ್ನ ಗಮನಕ್ಕೆ ತರಬೇಕು. ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವ ಜೊತೆಗೆ ಶೀಘ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು. ಎಂದು ತಿಳಿಸಿದರು.
ಇದೇ ಸಮಯದಲ್ಲಿ
ಚನ್ನಾಲಿಂಗನಹಳ್ಳಿ ಗ್ರಾಮದ ಶಿಕ್ಷಕರಾದ ಕೆ. ನಾಗರಾಜು ಮಾತನಾಡಿ ನಮ್ಮ ಗ್ರಾಮದಲ್ಲಿ ಇನ್ನು ಅನೇಕ ಕೆಲಸ ಕಾರ್ಯಗಳು ಆಗಬೇಕಾಗಿದೆ. ಸಿದ್ದಪ್ಪಾಜಿ ದೇವಸ್ಥಾನದ ಮುಂಭಾಗ ಮುಖ್ಯದ್ವಾರ ನಿರ್ಮಾಣ, ಬಾಬಾ ಸಾಹೇಬ್ ಅಂಬೇಡ್ಕರ್ ಅಥವಾ ಜಗಜೀವನ ರಾಮ್ ಹೆಸರಿನಲ್ಲಿ ಗ್ರಂಥಾಲಯ, ಹಳೇಬೀದಿ ಮತ್ತು ಹೊಸಬೀದಿ ನಡುವೆ ಸಂಪರ್ಕ ಸಾಧಿಸುವ ಕಿರು ಸೇತುವೆ ನಿರ್ಮಾಣ, ಸಾಂಸ್ಕೃತಿಕ ಭವನ ನಿರ್ಮಾಣ, ಸಮುದಾಯದ ಹೊಸ ಬಡಾವಣೆಯಲ್ಲಿ ಸಿಸಿ ರಸ್ತೆ ನಿರ್ಮಾಣ, ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಹೈ ಮಾಸ್ಕ್ ದೀಪ ಅಳವಡಿಸುವುದು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ ಮಾನ್ಯ ಶಾಸಕರಿಗೆ ಗ್ರಾಮಸ್ಥರ ಪರವಾಗಿ ಮನವಿ ಪತ್ರವನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಕಣ್ಣೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜಮ್ಮ, ಸದಸ್ಯರಾದ ರತ್ನಮ್ಮ, ಜ್ಯೋತಿ, ಸೋಮೇಶ, ರಮೇಶ, ಸೋಮಣ್ಣ, ಮುಖಂಡರಾದ ರಾಚಪ್ಪ, ನಾಗೇಂದ್ರ, ನಟರಾಜು, ಶ್ರೀಕಂಠ, ಮಲ್ಲೇಗೌಡ, ಸುರೇಶ್, ವೆಂಕಟೇಶ್,ರಾಚಪ್ಪ, ಯಜಮಾನರಾದ ಮಾದೇವ, ನಿಂಗರಾಜು, ಅರಸಯ್ಯ, ಕರಿಯನಪುರ ಕುಮಾರ, ರಾಜು, ಮಾದೇಶ್, ಮುಂತಾದವರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago