Breaking News

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ

Books available at discounted prices at Karnataka Media Academy

ಜಾಹೀರಾತು

ರಾಯಚೂರ ಜೂನ್‌ 11 (ಕ.ವಾ.): ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ.20ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ.
ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ. ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080-22860264 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ ಅವರು ತಿಳಿಸಿದ್ದಾರೆ.

About Mallikarjun

Check Also

ಕರ್ನಾಟಕ ಸ್ಟೇಟ್ ಕ್ರಿಕಿಟ್ಅಸೊಸಿಯೇಷನ್ ಅವರಿಂದ ಇದೇ ಜೂನ್-೨೮ ಮತ್ತು ೨೯ ರಂದು ರಾಯಚೂರು ವಲಯದಲ್ಲಿ ಜಿಲ್ಲಾ ಮಟ್ಟಕ್ಕೆ ಕ್ರೀಡಾಟುಗಳ ಆಯ್ಕೆ.

The Karnataka State Cricket Association will select players for the district level in the Raichur …

Leave a Reply

Your email address will not be published. Required fields are marked *