Congress Koppal District In-charge Smt. Deepika Reddy chaired a meeting of Koppal District Workers.

ಗಂಗಾವತಿ: ಕರ್ನಾಟಕ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ದೀಪಿಕಾರೆಡ್ಡಿ ಹಾಗೂ ಕರ್ನಾಟಕ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಇಲಾಹಿ ಸಿಕಂದರ್ ಅವರ ನೇತೃತ್ವದಲ್ಲಿ ಜೂನ್-೦೯ ಸೋಮವಾರ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಕಾರ್ಯಕಾರಿಣಿ ಸಭೆ ನಡೆಸಿ ಪಕ್ಷದ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ನಡೆಸಿದರು ಎಂದು ಗಂಗಾವತಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ರವಿ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು.
ಶ್ರೀಮತಿ ದೀಪಿಕಾರೆಡ್ಡಿಯವರು ಕೊಪ್ಪಳ ಜಿಲ್ಲೆಯ ಉಸ್ತುವಾರಿಯಾಗಿ ನೇಮಕಗೊಂಡಿದ್ದು, ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಹಾಗೂ ಕಾರ್ಯಕರ್ತರನ್ನು ಹುರಿದುಂಬಿಸುವ ಸಲುವಾಗಿ ಸಭೆ ನಡೆಸುವ ಮೂಲಕ ಸಭೆಯಲ್ಲಿ ಕಾರ್ಯಕರ್ತರಿಗೆ ಪಕ್ಷದ ಶ್ರೇಯೋಭಿವೃದ್ಧಿಗೆ ಸೂಚನೆಗಳನ್ನು ನೀಡಿದರು.
ಇದೇ ಮೊದಲ ಬಾರಿಗೆ ಭೇಟಿ ನೀಡಿದ ಶ್ರೀಮತಿ ದೀಪಿಕಾರೆಡ್ಡಿ ಹಾಗೂ ಇಲಾಹಿ ಸಿಕಂದರ್ ಅವರನ್ನು ಜಿಲ್ಲೆಯ ಯುವ ಕಾಂಗ್ರೆಸ್ ಮುಖಂಡರು ಅವರನ್ನು ಬೈಕ್ ರ‍್ಯಾಲಿ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿ ಪಕ್ಷದ ಕಾರ್ಯಾಲಯಕ್ಕೆ ಕರೆತಂದರು.
ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ಉಪಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ನಗರ ಘಟಕ, ಯುವ ಘಟಕಗಳ ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಶ್ರೀಯುತರ ಸಲಹೆ ಸೂಚನೆಗಳನ್ನು ಆಲಿಸಿ ಸಭೆಯನ್ನು ಯಶಸ್ವಿಗೊಳಿಸಿದರು.