Breaking News

ಸರ್ವೇ ನಂತರ ಹಕ್ಕುಪತ್ರ ವಿತರಣೆ ತಾಪಂಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಮಾಹಿತಿ

Distribution of title deeds after survey, information from TAP Executive Officers Rama Reddy Patil

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗಂಗಾವತಿ: ತಾಲೂಕಿನ ಶ್ರೀರಾಮನಗರದ ಗುಂತಗಲ್ ಕ್ಯಾಂಪ್ ಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಶುಕ್ರವಾರ ಭೇಟಿ ನೀಡಿ ಹಕ್ಕುಪತ್ರ ವಿತರಣೆ ಕುರಿತು ಮಾಹಿತಿ ಪಡೆದರು.

ನಂತರ ಅವರು ಮಾತನಾಡಿ, ಈಗಾಗಲೇ 2022ರಲ್ಲಿ101 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಬಾಕಿ ಉಳಿದ ಫಲಾನುಭವಿಗಳ ಹಕ್ಕುಪತ್ರ ವಿತರಣೆಗೆ ಕಾಲವಕಾಶ ಬೇಕಾಗುತ್ತದೆ. ಈ ವಿಷಯವನ್ನು ಸಚಿವರಾದ ಶಿವರಾಜ ತಂಗಡಗಿ ಹಾಗೂ ಜಿಲ್ಲಾ ಮಟ್ಟದ ಮೇಲಧಿಕಾರಿಗಳ ಗಮನಕ್ಕೆ ತರಲಾವುದು. ಜೊತೆಗೆ ತಾಲೂಕು ಪಂಚಾಯತ್ ಮತ್ತು ಕಂದಾಯ ಅಧಿಕಾರಿಗಳ ತಂಡ ರಚಿಸಿ ಕೂಲಂಕುಶವಾಗಿ ಸರ್ವೇ ಮಾಡಿಸಿ ವರದಿ ಪಡೆಯಲಾಗುವುದು. ನಂತರ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಶ್ರೀರಾಮನಗರ ಗ್ರಾಪಂ ಅಧ್ಯಕ್ಷರಾದ ಶಾಂತಪ್ಪ, ಸದಸ್ಯರಾದ ಶುಂಕಣ್ಣ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ ಕುರಡಿ, ಗ್ರಾಪಂ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.

ಪ್ರಗತಿ ನಗರಕ್ಕೆ ಭೇಟಿ: ಮರಳಿ ಗ್ರಾಪಂ ವ್ಯಾಪ್ತಿಯ ಪ್ರಗತಿ ನಗರದ ಸರ್ವೇ ನಂಬರ್ 18/2, 21/2 ಸ್ಥಳಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಭೇಟಿ ನೀಡಿ ಹಕ್ಕುಪತ್ರ ವಿತರಣೆ ಕುರಿತು ಸ್ಥಳ ಪರಿಶೀಲನೆ ಮಾಡಿದರು. ಗ್ರಾಪಂ ಪಿಡಿಓ ಬಸವರಾಜಗೌಡ್ರು, ಗ್ರಾಪಂ ಸಿಬ್ಬಂದಿಗಳು ಇದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *