KDP meeting chaired by District In-charge Minister Shivaraj Thangadagi on June 17

ಗಂಗಾವತಿ : ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಜೂನ್ 17 ರಂದು ಬೆಳಗ್ಗೆ 10.30 ಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ & ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ 2025-26ನೇ ಸಾಲಿನ ಕನಕಗಿರಿ, ಕಾರಟಗಿ, ಗಂಗಾವತಿ ತಾಲೂಕುಗಳ ತ್ರೈಮಾಸಿಕ ಕೆ.ಡಿ.ಪಿ. ಸಭೆಯನ್ನು ಆಯೋಜಿಸಲಾಗಿದೆ.
ಆದ್ದರಿಂದ ಮೂರು ತಾಲೂಕುಗಳ ತಾಲೂಕು ಮಟ್ಟದ ಅನುಷ್ಠಾನ ಇಲಾಖಾ ಅಧಿಕಾರಿಗಳು 2025-26ನೇ ಸಾಲಿನ ಏಪ್ರೀಲ್ ನಿಂದ ಮೇ 2025 ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಲು ತಾ.ಪಂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಕೋರಿರುತ್ತಾರೆ.