Breaking News

ಕೌಟುಂಬಿಕ ದೌರ್ಜನ್ಯ ಮತ್ತು ಬಾಲಕಾರ್ಮಿಕ ಪದ್ಧತಿಯ ಬಗ್ಗೆ ಜಾಗೃತಿ : ಜಯಶ್ರೀ ಬಿ ದೇವರಾಜ್

Screenshot 2025 06 18 16 41 40 03 E307a3f9df9f380ebaf106e1dc980bb6

Awareness about domestic violence and child labor: Jayashree B Devaraj

ಜಾಹೀರಾತು

   

ಕನಕಗಿರಿ : ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪಟ್ಟಣದ ಸ್ವಚ್ಛತಾ ಸಿಬ್ಬಂದಿ ವರ್ಗದವರಿಗೆ ಕನಕಗಿರಿ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ವತಿಯಿಂದ ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಬಾಲಕಾರ್ಮಿಕ ವಿರೋಧಿ ಕಾಯ್ದೆ POSH Act ನ ಬಗ್ಗೆ ಮತ್ತು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. 

ಈ ವೇಳೆ ಆಪ್ತ ಸಮಾಲೋಚಕರು ಕನಕಗಿರಿ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರ ಜಯಶ್ರೀ ಬಿ ದೇವರಾಜ್ ಮಾತನಾಡಿ 

ಕೌಟುಂಬಿಕ ಕಲಹವು ಗೃಹ ಹಿಂಸೆಗೆ ಕಾರಣವಾಗುತ್ತದೆ. ಇದು ದೈಹಿಕ, ಮಾನಸಿಕ, ಭಾವನಾತ್ಮಕ, ಲೈಂಗಿಕ ಮತ್ತು ಆರ್ಥಿಕ ದೌರ್ಜನ್ಯವನ್ನು ಒಳಗೊಂಡಿರುತ್ತದೆ. ಗೃಹ ಹಿಂಸೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ,

ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ನಿಷೇಧಿಸುತ್ತದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ನೇಮಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 

ಬಾಲ್ಯ ವಿವಾಹ ನಿಷೇಧ ಕಾಯ್ದೆಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳನ್ನು ಮದುವೆ ಮಾಡುವುದನ್ನು ನಿಷೇಧಿಸುತ್ತದೆ. 

ಕೌಟುಂಬಿಕ ದೌರ್ಜನ್ಯ ಮತ್ತು ಬಾಲಕಾರ್ಮಿಕ ಪದ್ಧತಿ ವಿರುದ್ಧ ದೂರು ದಾಖಲಿಸಲು ಹಲವಾರು ಕಾನೂನುಗಳಿವೆ.ಅಪರಾಧಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. 

ಕೌಟುಂಬಿಕ ದೌರ್ಜನ್ಯ ಮತ್ತು ಬಾಲಕಾರ್ಮಿಕ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸುವುದು ಮುಖ್ಯ ಸಹಾಯ ಬೇಕಾದಲ್ಲಿ, ಸಹಾಯವಾಣಿಗಳಿಗೆ ಕರೆ ಮಾಡಿ ಅಥವಾ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಮಾಹಿತಿ ನೀಡಿದರು. 

 ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ಪಟ್ಟಣ ಪಂಚಾಯಿತಿ ಕನಕಗಿರಿ, ಪಾರ್ವತಿ ಮತ್ತು ಹೊನ್ನೂರ್ ಬಿ  ಸಮಾಜ ಕಾರ್ಯಕರ್ತರು ಕನಕಗಿರಿ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರ ಹಾಗೂ ಚೌಡಮ್ಮ, ನಿಂಗಮ್ಮ, ಶಕುಂತಲಾ, ಶಾರದಾ, ಲಕ್ಷ್ಮಿ ಮತ್ತು ಇನ್ನಿತರು ಭಾಗವಹಿಸಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.