“Health check-up for civic workers”

ಕೊಟ್ಟೂರು ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಬುಧವಾರ ಕೈಗೊಳ್ಳಲಾಯಿತು. ಆರೋಗ್ಯ ಇಲಾಖೆಯ ವೈದ್ಯರಾದ ಮಂಜುನಾಥ್ ರವರು ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದರು. ಮುಖ್ಯಾಧಿಕಾರಿಗಳಾದ ನಸುರುಲ್ಲಾ ಮಾತನಾಡಿ, ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಪಟ್ಟಣದ ಸ್ವಚ್ಛತಾ ಕಾರ್ಯವನ್ನು ಮಾಡುವುದರಿಂದ ಕಾರ್ಮಿಕರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆಯ ಅಗತ್ಯವಿರುತ್ತದೆ. ಆದ್ದರಿಂದ ಎಲ್ಲಾ ಪೌರಕಾರ್ಮಿಕರು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು. ವೈದ್ಯರಾದ ಮಂಜುನಾಥ್ ರವರು ಎಲ್ಲಾ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ, ಪಟ್ಟಣ ಪಂಚಾಯಿತಿಯ ಸಿಬ್ಬಂದಿ ಹಾಜರಿದ್ದರು