Make the most of the awareness centers. Information from TAP EO Shri Rama Reddy Patil.

ಗಂಗಾವತಿ : ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರ ಗ್ರಾಮೀಣ ಮಟ್ಟದಲ್ಲಿ ಅರಿವು ಕೇಂದ್ರಗಳನ್ನು ತೆರೆದಿದ್ದು, ಇವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಮರೆಡ್ಡಿ ಪಾಟೀಲ್ ಅವರು ಹೇಳಿದರು.
ನಗರದ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಅರಿವು ಕೇಂದ್ರಗಳ ಸಲಹಾ ಸಮಿತಿ ಸದಸ್ಯರುಗಳಿಗೆ ಬುಧವಾರ ಆಯೋಜಿಸಿದ್ದ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಅರಿವು ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರಗಳಲ್ಲಿ ದಿನಪತ್ರಿಕೆ, ಕಥೆ, ಸಾಹಿತ್ಯ ಪುಸ್ತಕಗಳು ಇರುತ್ತವೆ. ಜೊತೆಗೆ ಸ್ಪರ್ಧಾತ್ಮಕ ವಿಷಯ ಸಂಬಂಧಿಸಿದ ಪುಸ್ತಕಗಳು ಇದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುತ್ತಿರುವ ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬೇಕು. ಕಂಪ್ಯೂಟರ್ ಶಿಕ್ಷಣ ಕಲಿಕೆಗೆ ನೆರವಾಗಲು ಎಲ್ಲ ಕೇಂದ್ರಗಳಲ್ಲಿ ಕಪ್ಯೂಟರ್ ಗಳು ಇದ್ದು, ಇದರ ಸದ್ಬಳಕೆ ಆಗಬೇಕು. ಈ ಬಗ್ಗೆ ಸಲಹಾ ಸಮಿತಿಯವರು ಹಂತಃಂತವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದು ಹೇಳಿದರು.
ವಿಷಯ ನಿರ್ವಾಹಕರಾದ ಶಿವಮೂರ್ತಯ್ಯ ಕಂಪಾಪೂರಮಠ, ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಶೇಖರಪ್ಪ ಸಿಂಧೋಗಿ, ದೇವರಾಜ, ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಂಥಾಲಯ ಮೇಲ್ವಿಚಾರಕರು ಇದ್ದರು.