Breaking News

ಕಿಷ್ಕಿಂದ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಕುರಿತು ಜಾಗೃತಿ 

Awareness about drug addiction among Kishkinda students

ಜಾಹೀರಾತು

ಗಂಗಾವತಿ :  ಕಿಷ್ಕಿಂದ ಪಿಯು ಕಾಲೇಜಿನಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ  ಹಾಗೂ ಗಂಗಾವತಿ ನಗರ ಪೊಲೀಸ್ ಇಲಾಖೆ ವತಿಯಿಂದ  ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಕ್ರಮ ಜರಗಿತು.

ಈ ವೇಳೆ ಹೇಮಂತ್ ಕುಮಾರ್ ASP ಮಾತನಾಡಿ ಇಂದಿನ ಶೇ.70ರಷ್ಟು ಯುವ ಜನಾಂಗವು ಹಲವಾರು ದುಶ್ಚಟಗಳಿಗೆ ಮಾರುಹೋಗುತ್ತಿದ್ದು, ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವ್ಯಸನದಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅವಶ್ಯಕವಾಗಿದೆ ಮಾದಕ ವ್ಯಸನಕ್ಕೆ ದಾಸರಾಗುತ್ತಿರುವ ಯುವಕರು ತಮಗೆ ಅರಿವಿಲ್ಲದೇಯೆ ಕಾನೂನು ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಮಾದಕ ವ್ಯಸನವು ವ್ಯಕ್ತಿಯನ್ನು ಮಾನಸಿಕ ಹಾಗೂ ದೈಹಿಕವಾಗಿ ಅಷ್ಟೇ ಅಲ್ಲದೇ ಅವನ ಜೀವನವನ್ನೇ ದುರಂತಕ್ಕೆ ತಳ್ಳುತ್ತದೆ,ಡ್ರಗ್ಸ್ ಗಾಂಜಾ

ತಂಬಾಕು ಪದಾರ್ಥ, ಮಧ್ಯಪಾನ ಸೇರಿದಂತೆ ಅನೇಕ ಮಾದಕ ವಸ್ತುಗಳು ಜೀವನವನ್ನೇ ಬಲಿ ತೆಗೆದುಕೊಳ್ಳುತ್ತವೆ ಎಂಬ ಉದಾಹರಣೆಗಳು ಸಾಕಷ್ಟಿವೆ. ವಿದ್ಯಾರ್ಥಿಗಳು ಉತ್ತಮ ಹವ್ಯಾಸ ಮೈಗೂಡಿಸಿಕೊಳ್ಳುವ ಮೂಲಕ ಆದರ್ಶಪ್ರಾಯರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಂತರ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಮಾತನಾಡಿ ವ್ಯಸನ ಮುಕ್ತ ಸಮಾಜ ನಿರ್ಮಿಸೋಣ..ಮಾದಕ ವ್ಯಸನಕ್ಕೆ ದಾಸರಾಗುತ್ತಿರುವ ಯುವಜನತೆ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡಿದ್ದಾರೆ. ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಂಡು ಬೇರೆಯವರಿಗೂ ಜಾಗೃತಿ ಮೂಡಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ವಿದ್ಯಾರ್ಥಿಗಳ ಶ್ರಮಿಸಬೇಕು. ಜೀವನದಲ್ಲಿ ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ಸೇವನೆ ಮಾಡುವುದಿಲ್ಲ ಎಂದು ಪ್ರತಿಯೊಬ್ಬ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಪ್ರಮಾಣ ಮಾಡಬೇಕು ಎಂದರು.

ಪಿ ಐ ಪ್ರಕಾಶ್ ಮಾಳಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮಾದಕ ವ್ಯಸನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ನೀಡಿ,

ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಮಾದಕ ವಸ್ತುಗಳ ಸೇವನೆ ಸೇರಿದಂತೆ ವಿವಿಧ ದುಶ್ಚಟಗಳಿಗೆ ದಾಸರಾಗಿ ಅದನ್ನು ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯೂ ಅನೇಕ ಅಪರಾಧಕೃತ್ಯಕ್ಕೆ ದಾರಿ ಮಾಡಿಕೊಡುತ್ತದೆ. 

ಮಾದಕ ವ್ಯಸನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಜತೆಗೆ ಅದನ್ನು ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.

ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಪೊಲೀಸ್ ಇಲಾಖೆಗೆ ಆಡಳಿತ ಅಧಿಕಾರಿ ಎಲ್ ವೀರ್ಭದ್ರ ರಾವ್ ಪ್ರಾಂಶುಪಾಲರು ಮುರಳಿ ಕೃಷ್ಣ  ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಾ. ಈಶ್ವರ್ ಸವಡಿ 

ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗ, ಉಪನ್ಯಾಸಕ ವೃಂದ,  ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

About Mallikarjun

Check Also

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ  ಸಮಿತಿಯು  ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದೆ.

The AIDSSO Koppal District Committee has expressed deep shock and outrage over the recent incident …

Leave a Reply

Your email address will not be published. Required fields are marked *