Breaking News

ಡೆಂಟಾ ವಾಟರ್ ಸಿಎಸ್‌ಆರ್‍‌ಫಂಡ್‌ನಿಂದ ನಿರ್ಮಿತ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವಚಲುವರಾಯಸ್ವಾಮಿ

Minister Chaluvarayaswamy inaugurates school building constructed with Denta Waters CSR Fund

ಜಾಹೀರಾತು

ಕೃಷ್ಣರಾಜಪೇಟೆ , ಜೂನ್‌ 24 : ತಾಲೂಕಿನ ಸಂತೆಬಾಚಹಳ್ಳಿ ಗ್ರಾಮದಲ್ಲಿ ಡೆಂಟಾ ವಾಟರ್ ಇನ್ಫ್ರಾ ಸೆಲ್ಯೂಷನ್ ಲಿಮಿಟೆಡ್ ಕಂಪನಿಯು ತನ್ನ ಸಿಎಸ್ ಆರ್ ಫಂಡ್ ಮೂಲಕ1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡ ವನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಉದ್ಘಾಟಿಸಿದರು.
ಈ ವೇಳೆ ಕಾಲೇಜಿನ ಕೊಠಡಿ ನಿರ್ಮಾಣಕ್ಕೆ ಸಿ.ಎಸ್.ಆರ್ ಅನುದಾದಡಿ ಒಂದೂವರೆ ಕೋಟಿ ರೂಪಾಯಿ ವಿಶೇಷ ಅನುದಾನ ಒದಗಿಸಿದ ಡೆಂಟಾ ವಾಟರ್ ಇನ್ಫ್ರಾ ಸಂಸ್ಥೆಯ ಮುಖ್ಯಸ್ಥ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಸಂತೆಬಾಚಹಳ್ಳಿ ಗ್ರಾಮದ ಪುತ್ರ ಸಿ. ಮೃತ್ಯುಂಜಯಸ್ವಾಮಿ ಅವರನ್ನು ಕಾರ್ಯಕ್ರಮದಲ್ಲಿ ಸಚಿವರು ಗೌರವಿಸಿದರು.

ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು “ ಸಿ ಎಸ್‌ ಆರ್‍‌ ಫಂಡ್‌ ನಲ್ಲಿ ಗ್ರಾಮೀಣ ಫ್ರೌಢಶಾಲೆ ಕಟ್ಟಡವನ್ನು ನಿರ್ಮಾಣ ಮಾಡಿದ್ದು ಸಂತಸದ ವಿಷಯ. ಕೈಗಾರಿಕೋದ್ಯಮಿಗಳು ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಹಾಯ ಮಾಡಿದರೆ ಸಮಾಜ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತದೆ . ಇದು ಸ್ಪರ್ಧಾತ್ಮಕ ಯುಗ. ವಿದ್ಯಾರ್ಥಿಗಳು ಜ್ಞಾನರ್ಜನೆಗೆ ದಿನದಲ್ಲಿ ಹೆಚ್ಚಿನ ಸಮಯ ಮೀಸಲಿಡಬೇಕು. ಕಳೆದ ಬಾರಿಗಿಂತಲೂ ಮುಂದಿನ ಸಾಲಿನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವ ರೀತಿ ಶಿಕ್ಷಕರು ಶ್ರಮಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜು ಗೊಳಿಸಬೇಕು “ ಎಂದು ಸಚಿವರು ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡೆಂಟಾ ವಾಟರ್‌ನ ಅಧ್ಯಕ್ಷರಾದ ಮೃತ್ಯುಂಜಯ ಸ್ವಾಮಿ ಮಾತನಾಡಿ, “ಡೆಂಟಾ ವಾಟರ್‌ನಲ್ಲಿ, ವಿನೂತನ ಸಿಎಸ್‌ಆರ್ ಉಪಕ್ರಮಗಳ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸುಸ್ಥಿರ ಬದಲಾವಣೆಗೆ ಚಾಲನೆ ನೀಡಲು ನಾವು ಬದ್ಧರಾಗಿದ್ದೇವೆ. ಬೆಂಗಳೂರಿನಿಂದ ಸಂಸ್ಕರಿಸಿದ ಒಳಚರಂಡಿ ನೀರನ್ನು ಬಳಸಿಕೊಂಡು ಅಂತರ್ಜಲವನ್ನು ಮರುಪೂರಣ ಮಾಡುವ ಮೂಲಕ ನಾವು ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿನ ಪ್ರಮುಖ ಟ್ಯಾಂಕ್‌ಗಳು ಮತ್ತು ಕೆರೆಗಳನ್ನು ಮರುಸ್ಥಾಪಿಸುತ್ತಿದ್ದೇವೆ. ಸಮುದಾಯಗಳನ್ನು ಉನ್ನತೀಕರಿಸುವ ಗುರಿ ಮತ್ತು ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಉದ್ದೇಶ “ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಆರ್ . ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಟಿ. ಮಂಜು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್.ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ನಾಗಮಂಗಲ ಡಿ ವೈಎಸ್ ಪಿ ಚೆಲುವರಾಜು, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ. ಪ್ರಕಾಶ್, ಸಂತೆಬಾಚಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೆ.ಎಂ.ಅನುರಾಧ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್. ಮಹೇಶ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಸ್.ಬಿ. ಮಂಜೇಗೌಡ, ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಡಾ. ಅಶೋಕ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಂಜೇಗೌಡ, ಬಿ. ನಾಗೇಂದ್ರಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮೇಗೌಡ, ಸಮಾಜ ಸೇವಕಿ ಹೇಮಾ ಮೃತ್ಯುಂಜಯ ಸ್ವಾಮಿ, ಪುರುಷೋತ್ತಮ್, ಕ್ಷೇತ್ರ ಶಿಕ್ಷಣಾ ಧಿಕಾರಿ ತಿಮ್ಮೇಗೌಡ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ವೇದಾ ವತಿ, ಗುತ್ತಿಗೆದಾರ ಸಂತೆಬಾಚಹಳ್ಳಿ ಜಗಧೀಶ್, ಗೆಳೆಯರ ಬಳಗ ಸೇವಾ ಸಂಸ್ಥೆಯ ಅಧ್ಯಕ್ಷ ಗೌಡ ಜಯಕುಮಾರ್, ಮುಖಂಡರಾದ ನಾಗರಾಜು, ಕೃಷ್ಣ, ಮರೀಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.