Breaking News

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಸಂಘದನೋಂದಣಿಪೂರ್ವ ಸಭೆಭಾರಧ್ವಾಜ್

Koppal District Building and Other Construction Workers Association Pre-registration meeting Bhardwaj

ಜಾಹೀರಾತು

ಗಂಗಾವತಿ: ನಗರದ ಬಸ್ ನಿಲ್ದಾಣದ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಇಂದು ಜೂನ್-೨೫ ಬುಧವಾರ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಾನೂನು ಸಲಹೆಗಾರರಾದ ಶೇಖರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನೋಂದಣಿ ಪೂರ್ವ ಸಭೆ ಜರುಗಿತು.
ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು ಸಂಘದ ಮೂಲ ಧ್ಯೇಯೋದ್ಧೇಶಗಳ ಕುರಿತು ಎಲ್ಲಾ ಸದಸ್ಯರಿಗೆ ತಿಳಿಸಿದರು. ಪ್ರಸ್ತುತ ಜಿಲ್ಲೆಯಾಧ್ಯಂತ ಅಂತರರಾಜ್ಯ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಸ್ಥಳೀಯ ಕಾರ್ಮಿಕರಿಗೆ ಕೆಲಸ ಸಿಗದಂತಾಗಿದೆ. ಅಲ್ಲದೇ ಮಹಿಳಾ ಕಾರ್ಮಿಕರಿಗೆ ಆಗುತ್ತಿರುವ ತೊಂದರೆಗಳು ಕುರಿತು ಚರ್ಚಿಸಿ, ಕಾರ್ಮಿಕ ಕಾಯ್ದೆ ಕಾನೂನುಗಳ ಬಗ್ಗೆ ಕಾರ್ಮಿಕರಿಗೆ ಅರಿವು ಮೂಡಿಸಲಾಗಿದೆ. ಕಟ್ಟಡ ಕಾರ್ಮಿಕರ ಬೋಗಸ್ ಕಾರ್ಡುಗಳು ಕಂಡುಬAದಲ್ಲಿ ಕೂಡಲೇ ಸಂಘಕ್ಕೆ ಹಾಗೂ ಕಾರ್ಮಿಕ ನಿರೀಕ್ಷಕರ ಕಛೇರಿಗೆ ತಿಳಿಸಬೇಕೆಂದರು. ಇದೇ ಸಂದರ್ಭದಲ್ಲಿ ಮೃತ ಸೋಮಪ್ಪ ಬುನಾದಿ ಕಾರ್ಮಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನಾಚರಣೆ ಮಾಡಲಾಯಿತು ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಗೌರವಾಧ್ಯಕ್ಷ ಭಾರಧ್ವಾಜ್ ಮಾತನಾಡಿ, ಇದು ಸಂಘದ ನೋಂದಣಿ ಪೂರ್ವಸಭೆಯಾಗಿದ್ದು, ಸಧ್ಯದಲ್ಲಿಯೇ ಸಂಘವು ನೋಂದಣಿಯಾಗಲಿದೆ. ನಂತರ ಸಂಘದ ಎಲ್ಲಾ ಸದಸ್ಯರು ಸಂಘದ ನೀತಿ ನಿಯಮಗಳಿಗೆ ಧಕ್ಕೆಯಾಗದಂತೆ ವರ್ತಿಸುತ್ತಾ, ಸಂಘದ ಎಲ್ಲಾ ಸಭೆಗಳಲ್ಲಿ ಪಾಲ್ಗೊಂಡು ಸಂಘ ತೀರ್ಮಾನಿಸುವ ನಿಯಮಗಳಿಗೆ ಬದ್ಧರಾಗಿರಬೇಕೆಂದು ಕರೆನೀಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಇಬ್ರಾಹಿಂ ಮೇಸ್ತಿç, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿ ಸೇರಿದಂತೆ ಸಾಕಷ್ಟು ಸದಸ್ಯರುಗಳು ಭಾಗವಹಿಸಿದ್ದರು.

About Mallikarjun

Check Also

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ  ಸಮಿತಿಯು  ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದೆ.

The AIDSSO Koppal District Committee has expressed deep shock and outrage over the recent incident …

Leave a Reply

Your email address will not be published. Required fields are marked *