Breaking News

ತಿಪಟೂರಿನಲ್ಲಿ 516 ನೇ ನಾಡಪ್ರಭುಕೆಂಪೇಗೌಡರ ಜಯಂತಿ ಆಚರಣೆ.

516th birth anniversary of Nadaprabhu Kempegowda celebrated in Tiptur.

ಜಾಹೀರಾತು

ತಿಪಟೂರು. ನಗರದ ತಾಲ್ಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯನ್ನು
ಶಾಸಕರಾದ ಕೆ ಷಡಕ್ಷರಿ ಅವರು ಜ್ಯೋತಿ ಬೆಳಗಿ ಪುಷ್ಪಚನೆ ಮಾಡುವ ಮುಖಾಂತರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದರು

ಶಾಸಕರಾದ ಕೆ ಷಡಕ್ಷರಿ ಮಾತನಾಡಿ ನಾಡಪ್ರಭು ಕೆಂಪೇಗೌಡರು ನಾಡಿನ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಯ ಏಳಿಗೆಗಾಗಿ ಶ್ರಮಿಸಿದವರು
ಈಗಾಗಲೇ ಕೆಂಪೇಗೌಡರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇವರ ಹೆಸರನ್ನೇ ಇಡಲಾಗಿದೆ ಸರ್ಕಾರ ಮತ್ತೊಂದು ವಿಮಾನ ನಿಲ್ದಾಣ ಮಾಡಲು ಸರ್ಕಾರ ಚಿಂತನೆ ನಡೆಸಿ ಶಿರಾ ಭಾಗದಲ್ಲಿ ಸೂಕ್ತ ಜಾಗ ಗುರುತಿಸಲಾಗಿದೆ ಎಂದರು.
ಇನ್ನು ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು
ಈ ಕಾರ್ಯಕ್ರಮದಲ್ಲಿ. ಉಪ ವಿಭಾಗಾಧಿಕಾರಿ ಸಪ್ತ ಶ್ರೀ. ತಹಶೀಲ್ದಾರ್ ಪವನ್ ಕುಮಾರ್. ಇಓ ಸುದರ್ಶನ್. ನಗರಸಭೆ ಅಧ್ಯಕ್ಷರಾದ ಯಮುನಧರಣೇಶ್. ಮೇಘಶ್ರೀ. ಚಿದಾನಂದ್. ವಿವೇಚನ್. ರಾಮೇಗೌಡ ಬಸವರಾಜ್. ಸೇರಿದಂತೆ ಉಪಸ್ಥಿತರಿದ್ದರು.
ವರದಿ ಮಂಜು ಗುರುಗದಹಳ್ಳಿ

ತಿಪಟೂರಿನಲ್ಲಿ ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು. ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ನಗರಸಭೆ ಆಶ್ರಯದಲ್ಲಿ ಈ ಆಚರಣೆ ನಡೆಯಿತು.
ತಿಪಟೂರು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕೆಂಪೇಗೌಡರ ಜಯಂತಿಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ, ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ಸ್ಮರಣಾ ಉಪನ್ಯಾಸ ನೀಡಲಾಯಿತು. ಅಲ್ಲದೆ, ವಿದ್ಯಾರ್ಥಿಗಳು ಕೆಂಪೇಗೌಡರ ಭಾವಚಿತ್ರಗಳನ್ನು ಹಿಡಿದು ಸಂಭ್ರಮಿಸಿದರು.

About Mallikarjun

Check Also

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ  ಸಮಿತಿಯು  ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದೆ.

The AIDSSO Koppal District Committee has expressed deep shock and outrage over the recent incident …

Leave a Reply

Your email address will not be published. Required fields are marked *