ಬೀದರ ನಗರದಲ್ಲಿ ಬಸವ ಸಂಸ್ಕೃತಿ ಅಭಿಯಾನ ಕುರಿತು ಪೂರ್ವ ಸಿದ್ಧತಾ ಸಭೆ ದಿ 04 ರಂದು ಜರುಗಿತ್ತು:

A pre-preparation meeting for the Basava Culture Campaign was held in Bidar city on the 4th:

ಬೀದರ್:  ಲಿಂಗಾಯತ ಮಠಾಧಿಪತಿಗಳ ಒಕ್ಕೂಟದವತಿಯಿಂದ ಹಾಗೂ ವಿವಿಧ ಬಸವ ಪರ ಸಂಘಟನೆಗಳ ವತಿಯಿಂದ ರಾಜ್ಯ ತುಂಬ ಹಮ್ಮಿಕೊಳ್ಳಲಾದ ಬಸವ ಸಂಸ್ಕೃತ ಅಭಿಯಾನ, ಬೀದರ ನಗರದಲ್ಲಿ 3ನೆ ಸೆಪ್ಟೆಂಬರ 2025 ರಂದು ನಿರ್ಧರಿಸಲಾಗಿದೆ, ಆದ್ದರಿಂದ ಪೂರ್ವ ಸಿದ್ಧತಾ ಸಭೆಯನ್ನೂ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ,ಬಸವಲಿಂಗ ಪಟ್ಟದ್ದೇವರು ಸಾನಿಧ್ಯದಲ್ಲಿ ಜರುಗಿತ್ತು ಹಾಗೂ ಪೂಜ್ಯರು ಅಭಿಯಾನದ ಕುರಿತು ಸಭೆಯನ್ನುದ್ದೇಶಿಸಿ ಮಾತನಾಡಿದರು. ಪೂಜ್ಯರಾದ ಡಾ ಹುಲಸೂರಿನ ಶಿವಾನಂದ ಮಹಾಸ್ವಾಮಿಗಳು, ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಅಭಿಯಾನ ಯಶಸ್ವಿಗೆ ಕೈಜೊಡಿಸುವುದಾಗಿ ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಶ್ರೀ ಬಸವರಾಜ ಧನ್ನೂರ ಅವರು ಅಭಿಯಾನದ ಮಹತ್ವ ಹಾಗು ರೂಪುರೇಷೆಗಳ ಕುರಿತು ಸಭೆಗೆ ಮಾಹಿತಿ ನೀಡಿ ಎಲ್ಲರೂ ಸಹಕರಿಸಿ ಯಶಸ್ವಿಗೊಳಿಸಲು ಕರೆ ಕೊಟ್ಟರು. ಈ ಸಭೆಯಲ್ಲಿ ಶ್ರೀ ಬಾಬು ವಾಲಿ, ಶ್ರೀ ಶ್ರೀಕಾಂತ ಸ್ವಾಮಿ, ಶ್ರೀ ಶರಣಪ್ಪ ಮಿಠಾರೆ , ಶ್ರೀ ಆನಂದ ದೇವಪ್ಪ, ಶ್ರೀ ಬಸವರಾಜ ಮಾಳಗೆ, ಶ್ರೀ ರಾಜೇಂದ್ರ ಗಂದಗೆ, ಮುಂತಾದವರು ಮಾತನಾಡಿ ಸಲಹೆ ನೀಡಿದರು ಹಾಗೂ ಯಶಸ್ವಿಗಾಗಿ ಕೈ ಜೋಡಿಸುವುದಾಗಿ ಸಭೆಗೆ ತಿಳಿಸಿದರು.ಜಿಲ್ಲೆಯ ವಿವಿಧ ಪೂಜ್ಯರು,ಲಿಂಗಾಯತ ಒಳ ಪಂಗಡಗಳ ಮುಖ್ಯಸ್ಥರು ಹಾಗು ಅನೇಕ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.

ಶ್ರೀಕಾಂತ ಸ್ವಾಮಿ, ಕರ್ನಾಟಕ ರಾಜ್ಯ ಸಂಚಾಲಕ, ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago