Appeal from AIDSSO organization demanding fulfillment of various demands in Koppa

ಕೊಪ್ಪಳ: ಶಿಕ್ಷಕರ ನೇಮಕ, ಶಾಲೆಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೂಲಕ ಮುಖ್ಯ ಮಂತ್ರಿಗಳಿಗೆ ಎಐಡಿಎಸ್‌ಒ ಸಂಘಟನೆಯಿಂದ ಮನವಿ ಸಲ್ಲಿಸಲಾಯಿತುಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿರುವುದು ಪಾಲಕರು, ಶಿಕ್ಷಕರು ಹಾಗೂ ರಾಜ್ಯದ ಶಿಕ್ಷಣ ಪ್ರೇಮಿ ಜನತೆಯಲ್ಲಿ ಆತಂಕವನ್ನುಂಟು ಮಾಡಿದೆ. ಗುಣಮಟ್ಟ ಕುಸಿಯಲು ಅನೇಕ ಅಂಶಗಳು ಕಾರಣವಾಗಿವೆ.
ಈ ನಿಟ್ಟಿನಲ್ಲಿ ಕೆಲವು ಪ್ರಮುಖ ಅಂಶಗಳೆಡೆಗೆ ನಿಮ್ಮ ಗಮನವನ್ನು ಸೆಳೆಯಲು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯು ಬಯಸುತ್ತದೆ. ಗುಣಮಟ್ಟದ ಬೋಧನೆ, ಕಲಿಕೆಗೆ ಪೂರಕ ವಾತಾವರಣ ಮತ್ತು ವೈಜ್ಞಾನಿಕ ಮೌಲ್ಯಮಾಪನ ವ್ಯವಸ್ಥೆ ಈ ಮೂರು ಅಂಶಗಳು ಶಿಕ್ಷಣದ ಗುಣಮಟ್ಟದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. 40 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರನ್ನು ನಿಯೋಜಿಸಬೇಕು. ರಾಜ್ಯದ 46 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ 59 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. 7 ಸಾವಿರ ಏಕೋಪಾಧ್ಯಾಯ ಶಾಲೆಗಳಿವೆ. ಶಾಲೆಯ ಮಕ್ಕಳಿಗೆ ಮೊಟ್ಟೆ, ಬಿಸಿ ಊಟಕ್ಕೆ ತರಕಾರಿ ತರಲು, ಇಲಾಖೆ ಕೆಲಸದ ಮೇಲೆ ಶಿಕ್ಷಕರು ಶಾಲೆಯಿಂದ ಆಚೆ ಹೋದರೆ ಮಕ್ಕಳಿಗೆ ಯಾರು ಗತಿ?’ ಎಂದು ಅವರು ಪ್ರಶ್ನಿಸಿದರು.
ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 73 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿಯಿದೆ. ಗುತ್ತಿಗೆ ಆಧಾರದಲ್ಲಿ ನೇಮಕಗೊಳ್ಳುವ ಶಿಕ್ಷಕರ ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಇಂತಹ ಸ್ಥಿತಿಯಲ್ಲಿ ಸಮರ್ಥವಾಗಿ ಬೋಧಿಸಲು ಸಾಧ್ಯ-ವಾಗುವುದಿಲ್ಲ. ಶಿಕ್ಷಣದ ಗುಣಮಟ್ಟ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದ್ದು, ಪಾಲಕರು, ಶಿಕ್ಷಕರು, ಶಿಕ್ಷಣ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ ಎಂದರು.
ಶಾಲೆಗಳಲ್ಲಿ ಸುಸಜ್ಜಿತ ಕೊಠಡಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಪ್ರಯೋಗಾಲಯ, ಗ್ರಂಥಾಲಯ ಸಹಿತ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕಡ್ಡಾಯ ತೇರ್ಗಡೆ ನೀತಿ ಕೈಬಿಟ್ಟು 1ನೇ ತರಗತಿಯಿಂದಲೇ ಪಾಸ್, ಫೇಲ್ ಪದ್ಧತಿ ಜಾರಿಗೊಳಿಸಬೇಕು. ಈಗ ಸಿಬಿಎಸ್‌ಸಿ ಮಾದರಿಯಲ್ಲಿ 80ಕ್ಕೆ ಕೇವಲ 13 ಅಂಕ ಪಡೆದರೆ ಉತ್ತೀರ್ಣಗೊಳಿ-ಸುವ ನಿಯಮಾವಳಿಯಿಂದಾಗಿ ಶೈಕ್ಷಣಿಕ ಗುಣಮಟ್ಟ ಪಾತಾಳಕ್ಕೆ ತಲುಪುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರವು ಸಮರೋಪಾದಿಯಲ್ಲಿ ಶಿಕ್ಷಣದ ಮೂಲಭೂತ ಅವಶ್ಯಕತೆಗಳನ್ನು ಪೂರೈಸಬೇಕು ಮತ್ತು ಗುಣಮಟ್ಟವನ್ನು ವೃದ್ದಿಸುವಲ್ಲಿ ನಿಯಮಿತವಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣತಜ್ಞರೊಂದಿಗೆ ಸಮಾಲೋಚಿಸಿ ವೈಜ್ಞಾನಿಕ ಹಾಗೂ ಪ್ರಜಾತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯು ಆಗ್ರಹಿಸುತ್ತದೆ ಎಂದರು