Breaking News

ಕಳಪೆ ಆಹಾರ ನೀಡುತ್ತಿರುವ ವಾರ್ಡನ್‍ಗಳ ವಿರುದ್ಧ ಕ್ರಮಕ್ಕೆ ಕರ್ನಾಟಕ ಜನಸೈನ್ಯ ಒತ್ತಾಯ

Karnataka Jana Sainya demands action against wardens serving poor quality food

ಜಾಹೀರಾತು

ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳುವೆ:ಡಿಸಿ ಭರವಸೆ

ಗಂಗಾವತಿ.ಜುಲೈ.21: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ಪೂರೈಸುತ್ತಿರುವ ವಾರ್ಡನ್‍ಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಜನಸೈನ್ಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರಿಗೆ ಸೋಮವಾರದಂದು ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ಜನಸೈನ್ಯ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ ಕಾಳೆ ಅವರು, ರಾಜ್ಯ ಸರಕಾರವು ವಸತಿ ನಿಲಯಗಳ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಆಹಾರ ಪೂರೈಕೆಗಾಗಿ ಟೆಂಡರ್ ಕರೆದು ಅನುದಾನ ನೀಡುತ್ತಿದೆ. ಆದರೆ ಎಸ್.ಸಿ. ವಸತಿ ನಿಲಯಗಳ ವಾರ್ಡನ್‍ಗಳು ಗುತ್ತಿಗೆದಾರರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕಳಪೆ ಆಹಾರ ಧಾನ್ಯಗಳನ್ನು ಖರೀದಿಸಿ ಗುತ್ತಿಗೆದಾರರ ಹೆಸರಿನಲ್ಲಿ ಬಿಲ್ ಪಾವತಿಸಿಕೊಂಡು ಹಣ ಪಡೆದುಕೊಳ್ಳುತ್ತಿದ್ದಾರೆ. ಎಸ್.ಸಿ. ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಅತ್ಯಂತ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿದ್ದಾರೆ. ಕೊಳೆತ ಹುಳುಬಿದ್ದ ತರಕಾರಿ, ಪಡಿತರ ಅಕ್ಕಿ ಇನ್ನಿತರ ಪದಾರ್ಥಗಳನ್ನು ಕಡಿಮೆ ದರದಲ್ಲಿ ಖರೀದಿಸಿ ವಂಚನೆ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಮುಖ್ಯಮಂತ್ರಿಗಳೇ ಆಹಾರ ಪೂರೈಕೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಿದ್ದರೂ ಕೂಡ ವಾರ್ಡನ್‍ಗಳು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ವಿದ್ಯಾರ್ಥಿಗಳ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ವಿದ್ಯಾರ್ಥಿಗಳಿಗೆ ಯಾವ ರೀತಿಯ ಆಹಾರ ಪೂರೈಸಬೇಕೆಂದು ಮೆನು ಚಾರ್ಟ್‍ನ್ನು ಸಿದ್ಧಪಡಿಸಿ ಎಲ್ಲಾ ವಸತಿ ನಿಲಯಗಳಿಗೆ ನೀಡಲಾಗಿದೆ. ವಾರ್ಡನ್‍ಗಳು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹೊಂದಾಣಿಕೆ ಮಾಡಿಕೊಂಡು ಮೆನು ಚಾರ್ಟ್ ಬದಲಾಯಿಸಿ ಕಳಪೆಮಟ್ಟದ ಆಹಾರ ಧಾನ್ಯಗಳನ್ನು ವಸತಿ ನಿಲಯಗಳಿಗೆ ಪೂರೈಸುತ್ತಿದ್ದಾರೆ.  ಜಿಲ್ಲಾಧಿಕಾರಿಗಳು ವಸತಿ ನಿಲಯಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟವನ್ನು ಪರಿಶೀಲಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದಂತೆ ಎಸ್.ಸಿ. ವಸತಿ ನಿಲಯಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟವನ್ನು ಪರಿಶೀಲಿಸಬೇಕು. ಕಳಪೆ ಆಹಾರ ಪೂರೈಸುತ್ತಿರುವ ವಾರ್ಡನ್‍ಗಳ ಮೇಲೆ ಸೂಕ್ತ ಕಾನೂನುಕ್ರಮ ಜರುಗಿಸಿ ಗುತ್ತಿಗೆದಾರರ ಟೆಂಡರ್ ರದ್ದುಗೊಳಿಸಿ ವಾರ್ಡನ್‍ಗಳನ್ನು ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಸುರೇಶ ಇಟ್ನಾಳ, ಈ ಕುರಿತಂತೆ ವಿದ್ಯಾರ್ಥಿಗಳಿಂದ ಸಾಕಷ್ಟು ದೂರುಗಳು ಬಂದಿವೆ. ಶೀಘ್ರದಲ್ಲಿಯೇ ಜಿಲ್ಲೆಯ ಎಸ್.ಸಿ. ವಸತಿ ನಿಲಯಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿ ತಪ್ಪಿತಸ್ಥ ವಾರ್ಡಮ್ ಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಈ ವೇಳೆ ಕರ್ನಾಟಕ ಜನಸೈನ್ಯ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಎಸ್.ಸೋಮನಾಥ್ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಡಿ.ಗೌಸ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಿಂಗಪ್ಪ ನಾಯಕ ರಾಂಪುರ್, ಗಂಗಾವತಿ ತಾಲೂಕು ಅಧ್ಯಕ್ಷರ ಮಲ್ಲೇಶ್ ನಾಯ್ಕ ಇತರರಿದ್ದರು.

About Mallikarjun

Check Also

ನೌಕರರಾಗದೆ ಮಾಲಕರಾಗಿ: ಎಸ್ ಶಿವರಾಮಗೌಡರು

Become an owner, not an employee: S. Shivarama Gowda ಗಂಗಾವತಿ :ದಿನಾಂಕ 23 7 2025 ,ವಿದ್ಯಾರ್ಥಿಗಳು …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.