Breaking News

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ‌ಪರೀಕ್ಷಾ ಕಾರ್ಯಗಾರ

Free exam workshop for SSLC students

ಕುಷ್ಟಗಿ: ಪಟ್ಟಣದ ಎಸ್ ವಿ ಸಿ ಶಿಕ್ಷಣ ಸಂಸ್ಥೆ ರಾಜ್ಯ ಮತ್ತು ಕೇಂದ್ರೀಯ ಪಠ್ಯಕ್ರಮದ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶ ಸುಧಾರಣೆಗಾಗಿ ಎರಡು ದಿನಗಳ ಉಚಿತ ಕಾರ್ಯಾಗಾರ ಹಮ್ಮಿಕೊಂಡಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖ್ಯಾತ ಶಿಕ್ಷಣ ತಜ್ಞ, ಪರೀಕ್ಷಾ ತರಬೇತುದಾರ ಹಾಗೂ ಲೇಖಕರಾದ ಅರವಿಂದ ಚೊಕ್ಕಾಡಿ ಜುಲೈ 26 ಹಾಗೂ 27 ರಂದು
ಎಸ್ ವಿ ಸಿ ಸಂಸ್ಥೆ ಆವರಣದಲ್ಲಿ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ನಿವೃತ್ತ ಉಪನ್ಯಾಸಕರಾದ ಬಸವರಾಜ ಸವಡಿ ಹಾಗೂ ರಾಜ್ಯ ಆಂಗ್ಲ ಭಾಷಾ ಸಂಪನ್ಮೂಲ ವ್ಯಕ್ತಿ
ಸಿ ವಿ ಪಾಟೀಲ ಭಾಗವಹಿಸಲಿದ್ದಾರೆ.
ಪ್ರಶ್ನೆ ಪತ್ರಿಕೆಗಳ ವಿಶ್ಲೇಷಣೆ
ವಿಷಯವಾರು ಅಧ್ಯಯನ ವಿಧಾನ, ಏಕಾಗ್ರತೆ ಹಾಗೂ ಧಾರಣ ಸಾಮರ್ಥ್ಯ ಸಾಧಿಸುವ ಮಾರ್ಗ ಕ್ಲಿಷ್ಟಕರ ಪರಿಕಲ್ಪನೆಗಳನ್ನು ನೆನಪಿಟ್ಟುಕೊಳ್ಳುವ ಬಗೆ, ಉತ್ತರ ಬರವಣಿಗೆಯ ಶೈಲಿ, ದೈನಂದಿನ ವೇಳಾಪಟ್ಟಿ ಹಾಗೂ ಅತಿ ಹೆಚ್ಚು ಅಂಕ ಪಡೆಯುವ ವಿಧಾನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಿದ್ದಾರೆ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು
ಅಂಕ ಗಳಿಸುವಲ್ಲಿ ಈ ಕಾರ್ಯಗಾರ ಮಕ್ಕಳಿಗೆ ನೆರವಾಗಲಿದೆ.
ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ದಾಖಲಾತಿಗಾಗಿ
ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ
+91 96060 44849 / +919620172080

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

About Mallikarjun

Check Also

ಪದವಿ ಶಿಕ್ಷಣ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ವೇದಿಕೆ ಮಾಡಿಕೊಳ್ಳಿ : ಡಾ.ಸೋಮರಾಜು

Make graduate education a platform for building a bright future: Dr. Somaraju ಗಂಗಾವತಿ: ಹೆಚ್.ಆರ್.ಶ್ರೀ ರಾಮುಲು …

Leave a Reply

Your email address will not be published. Required fields are marked *