Breaking News

ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ- ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್

Strict action to make the state drug-free - Chief Secretary to the Government Dr. Shalini Rajneesh

ಬೆಂಗಳೂರು (ಕರ್ನಾಟಕ ವಾರ್ತೆ) ಜುಲೈ 22:ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ ,ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ,ರಾಜ್ಯವನ್ನು ಮಾದಕ     ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದರು.

ಜಾಹೀರಾತು

ಇತ್ತೀಚಿಗೆ ವಿಧಾನಸೌಧದ ಸಭಾಂಗಣದಲ್ಲಿ ನಡೆದ 6 ನೇ ರಾಜ್ಯ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆ ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು,

ಡ್ರಗ್ಸ್ ತಡೆಗೆ ಸಂಬಂಧಿಸಿದ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್‌ಸೈಟ್ ನವೀಕರಿಸಬೇಕು.ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿಕೊಂಡು ಇತರೆ ಜಿಲ್ಲೆಗಳು ಅನುಸರಿಸಲು ಸೂಚನೆ ನೀಡಿದರು. ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಯಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು, ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಲು ನಿರ್ದೇಶನ ನೀಡಿದರು.

ನೋಂದಾಯಿತವಲ್ಲದ ಔಷಧ ಕಂಪನಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು.ಎಲ್ಲ ಔಷಧ ಅಂಗಡಿಗಳ ಮುಂದೆ “ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ ” ಎಂಬ ಫಲಕ ಕಡ್ಡಾಯವಾಗಿ ಅಳವಡಿಸಲು ಕ್ರಮ ಜರುಗಿಸಬೇಕು.ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನಗಳನ್ನು ( ಎಸ್ ಓ ಪಿ) ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಒಂದು ಕೇಂದ್ರಕ್ಕೆ ಭೇಟಿ ನೀಡಿ,ವರದಿ ಸಲ್ಲಿಸಲು ಸೂಚಿಸಿದರು.

ಹಾಸ್ಟೇಲುಗಳಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ರಕ್ಷಿಸಬೇಕು.ಪಾಸಿಟಿವ್ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಬೇಕು. ಎಎನ್‌ಟಿಎಫ್ ಮಾದರಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಉಪಸಮಿತಿಗಳನ್ನು ರಚಿಸಬೇಕು.ಕೆಂಪು ಪಟ್ಟಿಯಲ್ಲಿರುವ ಔಷಧಗಳ ಮಾರಾಟ ನಿಯಂತ್ರಿಸಲು ಮೇಲ್ವಿಚಾರಣೆ ಕಾರ್ಯ ಬಲಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.

ಸೈಬರ್ ಕಮಾಂಡ್ ಘಟಕದ ನಾರ್ಕೊಟಿಕ್ಸ್ ಮತ್ತು ಸಂಘಟಿತ ಅಪರಾಧಗಳ ವಿಭಾಗದ ಪೊಲೀಸ್ ಅಧೀಕ್ಷಕಿ ಸವಿತಾ ಎಸ್ ಮತ್ತಿತರರು ಇದ್ದರು.

About Mallikarjun

Check Also

ಆರೋಗ್ಯ, ಆರ್ಥಿಕ ಶಕ್ತಿಯನ್ನು ಸಂಪಾದಿಸಲು ಜ್ಯೋತಿ ಗೊಂಡಬಾಳ ಸಲಹೆ

Jyoti Gondaba’s advice for gaining health and financial strength ಕೊಪ್ಪಳ: ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ದೇಹ, ಮನಸ್ಸು …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.