Breaking News

ಸುಧಾರಿತ ತಂತ್ರಜ್ಞಾನ ಸಾಮರ್ಥ್ಯಗಳು ಪೊಲೀಸ್ ವ್ಯವಸ್ಥೆಗೆ ಬಲ‌ ನೀಡಲಿವೆ.

Advanced technological capabilities will strengthen the police system.

ಕಲಬುರಗಿಯಲ್ಲಿ ಡ್ರೋನ್ ತಂತ್ರಜ್ಞಾನದೊಂದಿಗೆ ಸಾರ್ವಜನಿಕ ಸುರಕ್ಷತಾ ಮೂಲಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎಐ ತಂತ್ರಜ್ಞಾನದ ಸುಧಾರಿತ ಕಣ್ಗಾವಲಿನ ‘ನಿಂಬಲ್-ಐ’ ಮತ್ತು ‘NS01’ ಡ್ರೋನ್‌ಗಳನ್ನು ವಿಧಾನಸೌಧದ ಕಾರ್ಯಾಲಯದಲ್ಲಿ ಇಂದು ಕಲಬುರಗಿ ನಗರ ಪೊಲೀಸರಿಗೆ ಹಸ್ತಾಂತರಿಸಲಾಯಿತು.

Screenshot 2025 07 24 19 08 54 95 6012fa4d4ddec268fc5c7112cbb265e74948804494240778486 588x1024

ಡ್ರೋನ್‌ಗಳು ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಮತ್ತು ಹಗಲು ಕಣ್ಗಾವಲು, ವಾಹನಗಳ ನಂಬರ್ ಪ್ಲೇಟ್ ಗುರುತಿಸುವಿಕೆ, ಜನಸಂದಣಿ ಮತ್ತು ವಾಹನಗಳನ್ನು ಪತ್ತೆ ಹಚ್ಚುವುದು ಸೇರಿದಂತೆ ಸುಧಾರಿತ ತಂತ್ರಜ್ಞಾನ ಸಾಮರ್ಥ್ಯಗಳು ಪೊಲೀಸ್ ವ್ಯವಸ್ಥೆಗೆ ಬಲ‌ ನೀಡಲಿವೆ.

ಕರ್ನಾಟಕದಲ್ಲಿ ವಿನ್ಯಾಸಗೊಳಿಸಲಾದ ಮತ್ತು ತಯಾರಿಸಲಾದ ಡ್ರೋನ್‌ಗಳು AI-ಚಾಲಿತ ಕಣ್ಗಾವಲು ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿದ್ದು, ಖಾಸಗಿ ವಲಯದ ಸಿಎಸ್‌ಆರ್ ಬೆಂಬಲದ ಮೂಲಕ ಕಲಬುರಗಿ ಪೊಲೀಸರಿಗೆ ನಿಯೋಜಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಐಟಿ ಮತ್ತು ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ, ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ, ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ. ಎಸ್.ಡಿ.ಶರಣಪ್ಪ ಹಾಗೂ ಮುಂತಾದವರು ಉಪಸ್ಥಿತರಿದ್ದರು.

About Mallikarjun

Check Also

screenshot 2025 12 08 17 40 00 68 680d03679600f7af0b4c700c6b270fe7.jpg

ಭಾಗ್ಯನಗರ: ಪ್ರಾಣಿ ಆರೈಕೆ ಕೇಂದ್ರದಲ್ಲಿನ ನಾಯಿಗಳನ್ನು ದತ್ತು ಪಡೆಯಲು ಅವಕಾಶ

ಭಾಗ್ಯನಗರ: ಪ್ರಾಣಿ ಆರೈಕೆ ಕೇಂದ್ರದಲ್ಲಿನ ನಾಯಿಗಳನ್ನು ದತ್ತು ಪಡೆಯಲು ಅವಕಾಶ Bhagyanagar: Dogs at animal care center available …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.