Breaking News

ಅರೆಸತ್ಯ ಮತ್ತು ಸುಳ್ಳು ಸುದ್ದಿಗಳು ಪ್ರಾಣವಾಯುವನ್ನು ಹಾಳು ಮಾಡುತ್ತವೆ: ಕೆ.ವಿ.ಪ್ರಭಾಕರ್

Half-truths and fake news destroy the lifeblood: K.V. Prabhakar

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಲಿ: ಕೆ.ವಿ.ಪಿ

ಜಾಹೀರಾತು

ಬೆಂಗಳೂರು ಜು 31: ಮಾಧ್ಯಮಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ” ವನ್ನು ಉದ್ಘಾಟಿಸಿ, ಪುರಸ್ಕೃತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಸ್ವಾತಂತ್ರ್ಯಾ ಬಳಿಕ ಅಭಿವೃದ್ಧಿ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ ಸಮಾಜವನ್ನು ಎಚ್ಚರಿಸುವ ಹೊಣೆಗಾರಿಕೆಯನ್ನು ನಿರ್ವಹಿಸಿದ್ದವು. ಆದರೆ ಇಂದು ಅರೆಸತ್ಯ ಮತ್ತು ಸುಳ್ಳು ಸುದ್ದಿಗಳು ಭಾರತೀಯ ಪತ್ರಿಕೋದ್ಯಮದ ಈ ಮಹೋನ್ನತ ಘನತೆಯನ್ನು ಹಾಳುಗೆಡಹುವ ರೀತಿಯಲ್ಲಿ ಕೆಲಸ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಪತ್ರಕರ್ತರೂ, ಸಂಪಾದಕರೂ ಆಗಿದ್ದ ಅಂಬೇಡ್ಕರ್ ಅವರು ಸಂಘಟನೆ ಮತ್ತು ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಸಂಘಟಕ ಧ್ವನಿ ಸರ್ಕಾರದ ಮತ್ತು ಸಮಾಜದ ಕಣ್ಣು ತೆರೆಸುತ್ತವೆ ಎಂದಿದ್ದರು.

ಪತ್ರಿಕಾ ಸಂಘಟನೆಗಳು, ಪತ್ರಕರ್ತರ ಸಂಘಗಳು ಪ್ರಜಾಪ್ರಭುತ್ವ ಮತ್ತು ಮಾಹಿತಿ ಹಕ್ಕುಗಳ ರಕ್ಷಣೆಗೆ ಪ್ರಮುಖ ಅಸ್ತ್ರಗಳು ಎನ್ನುವುದನ್ನು ನಾವು ಮರೆಯಬಾರದು ಎಂದರು.

ಮಾಧ್ಯಮವನ್ನು ಜನಪರವಾಗಿ, ಭಯಮುಕ್ತವಾಗಿಡಲು ಪತ್ರಕರ್ತರು ಯಾವುದೇ ಹಿಂಜರಿಕೆ ಇಲ್ಲದೆ ವರದಿ ಮಾಡಲು ಇದು ಸಹಾಯ ಮಾಡುವ ರೀತಿಯಲ್ಲಿ ಸಂಘಟನೆಗಳು ಶ್ರಮಿಸಬೇಕು ಎಂದು ಕರೆ ನೀಡಿದರು.

ಮಾಧ್ಯಮ ಸಂಘಟನೆಗಳು ಪತ್ರಕರ್ತರಿಗೆ ನೈತಿಕ ಮಾರ್ಗಸೂಚಿಗಳನ್ನು ಸ್ವಯಂಪ್ರೇರಿತವಾಗಿ ಅಳವಡಿದಿಕೊಳ್ಳಲು ಉತ್ತೇಜಿಸಬೇಕು. ಸುಪ್ರೀಂಕೋರ್ಟ್ ಮತ್ತು ಹೈ ಕೋರ್ಟ್ ಗಳು ಹಲವು ಸಂದರ್ಭಗಳಲ್ಲಿ ಮಧ್ಯಮಗಳಿಗೆ ಎಚ್ಚರಿಸಿವೆ. “ಸ್ವಯಂ ನೈತಿಕ ನಿಯಮಗಳನ್ನು ಅಳವಡಿಸಿಕೊಳ್ಳುವಂತೆ” ಸೂಚನೆಗಳನ್ನು ನೀಡಿರುವುದು ಗಂಭೀರವಾದ ಸಂಗತಿ ಎಂದರು.

ಇದು ಮಾಧ್ಯಮದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ಇದನ್ನು ನಾವೆಲ್ಲಾ ಪೋಷಣೆ ಮಾಡೋಣ ಎಂದರು.

ಸಂಘದ ಬೇಡಿಕೆ ಈಡೇರಿಕೆಗೆ ಕ್ರಮ

ಪತ್ರಕರ್ತರ ಪಿಂಚಣಿಯ ನಿಯಮಗಳನ್ನು ಮತ್ತಷ್ಟು ದಾರಾಳಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

About Mallikarjun

Check Also

ಸೆ. 2 ಮತ್ತು 3 ರಂದು ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ: ನಿಷೇಧಾಜ್ಞೆ ಜಾರಿ

Exams for Group C posts of various departments on Sept. 2 and 3: Prohibitory order …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.