Breaking News

ದಿ,12,13,14 ಆಗಸ್ಟ್ 2025 ಮೂರು ದಿನಗಳಂದು ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ  ಧರಣಿ.

A three-day, state-wide, district-level ASHA workers will hold a three-day sit-in on August 12, 13, and 14, 2025.


   ಕೊಪ್ಪಳ,ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ(ಎಐಯುಟಿಯುಸಿ)ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ಡಿ. ನಾಗಲಕ್ಷ್ಮಿ ಮಾತನಾಡುತ್ತ ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ ಮತ್ತು ಸರ್ಕಾರದ ನಿರೀಕ್ಷೆಯಂತೆ ಆಶಾ ತನ್ನ ಸೇವೆಯಿಂದ ಕಟ್ಟಕಡೆಯ ಜನರನ್ನೂ ಆರೋಗ್ಯವಂತರನ್ನಾಗಿಡಲು ಹಗಲು-ರಾತ್ರಿ ಶ್ರಮಿಸುತ್ತಿರುವರು. ಇವರ ಸೇವೆಗೆ ಸಮುದಾಯದಿಂದ ಸಿಗುವ ಗೌರವಾದರಗಳು ಸಂತಸ ನೀಡಿವೆಯಾದರೂ, ಸೇವೆ ಪಡೆದುಕೊಳ್ಳುವ ನಮ್ಮ ಸರ್ಕಾರಗಳು ಇವರ ಸೇವೆಗೆ ತಕ್ಕ ಪ್ರತಿಫಲ ನೀಡದೆ ನಿರಾಸೆಯಲ್ಲಿರುವಂತೆ ಮಾಡಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ, ಇದೇ 2025ಜನವರಿ 7ರಿಂದ 10 ನೇ ತಾರೀಖಿನ.!ವರೆಗೆ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದಿದ್ದು ತಮಗೆ ತಿಳಿದಿದೆ. ರೂ.15000 ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ನಡೆಸಿದ ಈ ಹೋರಾಟದಲ್ಲಿ ರಾಜ್ಯದ ಸುಮಾರು 42000 ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಜನವರಿ 10,2025 ರಂದು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ, ಮಾನ್ಯ ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳನ್ನು ಕರೆದು ಸಭೆ ಮಾಡಿರುತ್ತಾರೆ. ಈ ಸಭೆಯಲ್ಲಿ ನಮ್ಮೊಂದಿಗೆ ಮಾನ್ಯ ಆರೋಗ್ಯ ಮಂತ್ರಿಗಳು, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಕೆಳಗಿನಂತೆ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಏಪ್ರಿಲ್ 2025ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10000ಗಳ ಗೌರವಧನವನ್ನು ನೀಡಲಾಗುವುದು. ರೂ.10000 ಹೊರತುಪಡಿಸಿ, ಕಾಂಪೋನೆAಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, ರೂ. 10000 ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು. ಈ ಕುರಿತು ಕೂಡಲೇ ಸರ್ಕಾರದಿಂದ ಆದೇಶಿಸಬೇಕು.
ಈ ವರ್ಷದ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಳ ಮಾಡಲಾಗುವುದು. ಎಂದು ಭರವಸೆ ನೀಡಲಾಗಿತ್ತು. ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಿಸಿದಂತೆ 42000 ಆಶಾ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಳ ಮಾಡಬೇಕು.
ಆದರೆ ಈ ಬಜೆಟ್‌ನಲ್ಲಿ ಕೇವಲ 15004 ಆಶಾಗಳಿಗೆ ಕಡಿಮೆ ಇದ್ದ ತಂಡ ಆಧಾರಿತ ಪ್ರೋತ್ಸಾಹಧನ ರೂ.1000 ಮಾತ್ರ ನೀಡಲಾಗಿದೆ.
ಕೆಲವು ಬಹುದಿನಗಳ ಬೇಡಿಕೆಗಳ ಬಗ್ಗೆ ಸೂಕ್ತಕ್ರಮ ಕೈಗೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ನಿರ್ದೇಶಿಸಿರುತ್ತಾರೆ.
ಈ ತೀರ್ಮಾನಗಳನ್ನು ಆರೋಗ್ಯ ಇಲಾಖೆಯ ಮಾನ್ಯ ಆಯುಕ್ತರು ಸರ್ಕಾರದ ಪರವಾಗಿ ಪ್ರತಿಭಟನಾ ಸ್ಥಳ ಫ್ರೀಡಂ ಪಾರ್ಕ್ಗೆ ಆಗಮಿಸಿ ಸಾವಿರಾರು ಆಶಾಗಳ ಮುಂದೆ ಬಂದು ಘೋಷಣೆ ಮಾಡಿದರು. ನಂತರ ಹೋರಾಟ ಹಿಂತೆಗೆದುಕೊಳ್ಳಲಾಯಿತು. ಮಾಧ್ಯಮಗಳಲ್ಲೂ ಕೂಡ ಅಧಿಕೃತವಾಗಿ ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿರುತ್ತಾರೆ. ಆಡಳಿತ ಪಕ್ಷದ ಹಲವಾರು ಸಚಿವರುಗಳು, ಶಾಸಕರು ಈ ಬಗ್ಗೆ ಪೋಸ್ರ‍್ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಆದರೆ ನೋವಿನ ವಿಷಯವೆಂದರೆ ಇಲ್ಲಿಯವರಗೆ 7 ತಿಂಗಳು ಕಳೆದರೂ ಈ ಕುರಿತು ಸ್ಪಷ್ಟ ಆದೇಶ ಹೊರಬಿದ್ದಿಲ್ಲ.

ಮತ್ತೊಂದೆಡೆ, ಆಶಾ ಕಾರ್ಯಕರ್ತೆಯರಿಗೆ ಇತ್ತೀಚಿಗೆ ಇಲಾಖೆಯಿಂದ ಆತಂಕ ಮೂಡಿಸುವ ಕೆಳಗಿನ ಆದೇಶಗಳನ್ನು ಮಾಡಿರುವರು. ಆದರೆ ಸೂಕ್ತ ಪರಿಹಾರ ನೀಡಿರುವುದಿಲ್ಲ.

ಆಶಾಗಳಲ್ಲಿಯೇ ಒಬ್ಬರನ್ನು ಕಳೆದ 10 ವರ್ಷಗಳಿಂದ 20ಆಶಾಗಳಿಗೆ ಒಬ್ಬರಂತೆ ಸುಮರು 2000 ಸುಗಮಕಾರರಾಗಿ ಕೆಲಸಕ್ಕೆ ಪಡೆದುಕೊಂಡು ಧಿಡೀರನೆ ತೆಗೆದು ಹಾಕಿರುವರು.
60ವರ್ಷ ವಯಸ್ಸಿನ ಆಶಾ ಕಾರ್ಯಕರ್ತೆಯರಿಗೆ ಧಿಡೀರನೆ ತೆಗೆದು ನಿವೃತ್ತಿ ಮಾಡಿರುತ್ತಾರೆ. 17 ವರ್ಷದಿಂದ ಸೇವೆ ಮಾಡಿದ ಈ ಆಶಾಗೆ ಯಾವುದೇ ಪರಿಹಾರ ನೀಡದೆ ಬೀದಿಗೆ ತಳ್ಳಿರುವರು.
ಈಗ ಕಾರ್ಯ ನಿರ್ವಹಿಸುವ ಸುಮಾರು 41000 ಆಶಾಗಳಿಗೆ ಅವರ ಕೆಲಸದ ಮೌಲ್ಯಮಾಪನ ಮಾಡುವ ಆದೇಶ ಹೊರಡಿಸಿ ವಿವಿಧ ರೀತಿಯಲ್ಲಿ ಮೌಲ್ಯಮಾಪನ ಮಾಡಿಸುತ್ತಿದ್ದಾರೆ. ಮೌಲ್ಯಮಾಪನದ ಮಾದರಿಯನ್ನು ಸಂಘದಿAದ ಸಂಪೂರ್ಣವಾಗಿ ವಿರೋಧಿಸುತ್ತೇವೆ. ಏಕೆಂದರೆ ಇಲ್ಲಿ
ಆಶಾ ಆನ್ಲೈನ್ ದಾಖಲಾತಿಯನ್ನು (ಆಶಾ ಸಾಫ್ಟ್) ಪರಿಶೀಲನೆಗೆ ತೆಗೆದುಕೊಳ್ಳಲಾಗಿದೆ. ಈಗಾಗಲೇ ಈ ಆನ್ಲೈನ್ ದಾಖಲಾತಿಯು ಸರಿಯಾಗಿ ದಾಖಲಾಗದಿರುವ ಬಗ್ಗೆ, ವೆರಿಫೈ ಮಾಡದಿರುವ ಬಗ್ಗೆ, ಹಲವಾರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಸಂಘದಿoದ ಹೋರಾಡುತ್ತಲೇ ಇದ್ದೇವೆ. ಈಗ ಇದನ್ನು ಮಾದರಿಯಾಗಿ ಇಟ್ಟುಕೊಂಡಲ್ಲಿ ತಪ್ಪು ಮಾಹಿತಿಯಿಂದ ಆಶಾಗಳನ್ನು ಕೈಬಿಡುವಂತಾಗುತ್ತದೆ. ಈಗಾಗಲೇ ರಾಜ್ಯದ
ಆಶಾಗಳು ಕೋಟ್ಯಂತರ ರೂ.ಗಳ ನಷ್ಟವನ್ನು ಈ ಆನ್ ಲೈನ್ ದಾಖಲಾತಿಯಿಂದ ಅನುಭವಿಸುತ್ತಿರುವರು. ಇದರಿಂದ ಕೆಲಸ ಕಳೆದುಕೊಳ್ಳುವ ಆತಂಕವನ್ನು ಅನುಭವಿಸುತ್ತಿರುವರು.
ಜನಸಂಖ್ಯೆ ವಿಂಗಡಣೆಯನ್ನು ಈಗಾಗಲೇ ಅಲ್ಲಿಯ ಭೌಗೋಳಿಕರಣಕ್ಕೆ ತಕ್ಕಂತೆ ವಿಂಗಡಿಸಿದ್ದಾರೆ. ಮತ್ತಷ್ಟು ಜನಸಂಖ್ಯೆ ಹೆಚ್ಚಿಸಿದಲ್ಲಿ ಆಶಾಗಳಿಗೆ ಕಾರ್ಯನಿರ್ವಹಿಸಲು ತೊಂದರೆ ಆಗುತ್ತದೆ. 3-4ಹಳ್ಳಿಗಳು ಬಂದರೆ ಕಾರ್ಯನಿರ್ವಹಿಸಲು ಕಷ್ಟವಾಗುತ್ತದೆ. ಇದರಿಂದ ಆಶಾಗಳಿಗೆ ಆತಂಕ ಸೃಷ್ಟಿಯಾಗಿದೆ.
ಮಾನ್ಯ ಮುಖ್ಯಮಂತ್ರಿಗಳು ಕಳೆದ 7 ತಿಂಗಳ ಹಿಂದೆ ತೀರ್ಮಾನಿಸಿ, ಘೋಷಿಸಿದ ಆದೇಶಗಳನ್ನು ಕೂಡಲೇ ಮಾಡಬೇಕೆಂದು ಮತ್ತು ಕೆಳಗಿನ ಹಕ್ಕೊತ್ತಾಯಗಳಿಗೆ ಆಗ್ರಹಿಸಿ, ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿರುತ್ತಾರೆ. ಈ ಮುಂದೆಯೂ ಆಶಾ ಕಾರ್ಯಕರ್ತೆಯರು ಉನ್ನತ ಹಂತದ ಹೋರಾಟಕ್ಕೆ ಅಣಿಯಾಗಿ ದಿನಾಂಕ: 12,13,14 ಆಗಸ್ಟ್ 2025 ಮೂರು ದಿನಗಳಂದು ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ “ಮಾತುಕೊಟ್ಟಂತೆ ನಡೆದುಕೊಳ್ಳಬೇಕೆಂದು” ಈ ಮೂಲಕ ಆಗ್ರಹಿಸಲು ಮುಂದಾಗಿರುವರು. ಹಾಗೆಯೇ ಎಂದಿನoತೆ ಎಲ್ಲಾ ಆಶಾ ಕಾರ್ಯಕರ್ತೆಯರು ಹೋರಾಟದ ಯಶಸ್ಸಿಗೆ ಒಗ್ಗಟ್ಟಿನಿಂದ ಸಕ್ರಿಯವಾಗಿ ಭಾಗಿಯಾಗಬೇಕು ಎಂದು ಸಂಘದಿಂದ ಕರೆ ನೀಡುತ್ತೇವೆ.
ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದವರು ಡಿ ನಾಗಲಕ್ಷ್ಮಿ ರಾಜ ಕಾರ್ಯದರ್ಶಿಗಳು ಆಶಾ ಕಾರ್ಯಕರ್ತೆಯರ ಸಂಘ ಶರಣು ಗಡ್ಡಿ ಜಿಲ್ಲಾಧ್ಯಕ್ಷರು ಕೊಪ್ಪಳ    ಕೌಶಲ್ಯ ದೊಡ್ಡ ಗೌಡರ್ ಜಿಲ್ಲಾ ಕಾರ್ಯದರ್ಶಿಗಳು ಜಿಲ್ಲಾ ಮುಖಂಡರಾದ ಶೋಭಾ ಹೂಗಾರ್, ವಿಜಯಲಕ್ಷ್ಮಿ ಆಚಾರ್, ಸುನಿತಾ ಹುಲಗಿ, ಶಂಕ್ರಮ್ಮ ಹಳ್ಳಿಕೇರಿ, ಶಬನ ಹುಲಿಗಿ, ಅಂಜಿನಮ್ಮ,  ಶಾರದಾ, ಗೀತಾ, ಸಂಗೀತ, ರೇಖಾ, ಲಲಿತ ಹಿರೇಮಠ ಅನ್ನಪೂರ್ಣ, ಶಿವಮ್ಮ,ಮುಂತಾದವರು ಉಪಸ್ಥಿತರಿದ್ದರು.                                             

About Mallikarjun

Check Also

ಪದವಿ ಶಿಕ್ಷಣ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ವೇದಿಕೆ ಮಾಡಿಕೊಳ್ಳಿ : ಡಾ.ಸೋಮರಾಜು

Make graduate education a platform for building a bright future: Dr. Somaraju ಗಂಗಾವತಿ: ಹೆಚ್.ಆರ್.ಶ್ರೀ ರಾಮುಲು …

Leave a Reply

Your email address will not be published. Required fields are marked *