Government College of Visual Arts: Applications invited for MVA postgraduate degree admissions
ಕೊಪ್ಪಳ ಜುಲೈ 30 (ಕರ್ನಾಟಕ ವಾರ್ತೆ): ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಥಮ ಬಿ.ವಿ.ಎ. ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ `ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್’ (ಎಂ.ವಿ.ಎ) (ಎರಡು ಶೈಕ್ಷಣಿಕ ವರ್ಷದ ನಾಲ್ಕು ಸೆಮಿಸ್ಟರ್ ಸಿ.ಬಿ.ಸಿ.ಎಸ್ ಪದ್ದತಿ) ದೃಶ್ಯ ಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಆಸಕ್ತ ಅಭ್ಯರ್ಥಿಗಳು ಕಛೇರಿಯಿಂದ ಅರ್ಜಿಗಳನ್ನು ಪಡೆದು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಎಂ.ವಿ.ಎ. ಸ್ನಾತಕೋತ್ತರ ಪದವಿಯಲ್ಲಿ ಚಿತ್ರಕಲೆ, ಗ್ರಾಫಿಕ್ಸ್ ಮತ್ತು ಶಿಲ್ಪಕಲೆ ವಿಭಾಗಳಲ್ಲಿ ವಿಶೇಷ ಆಧ್ಯಯನದ ಸ್ನಾತಕೋತ್ತರ ಪದವಿಯಾಗಿರುತ್ತದೆ. ಪ್ರಥಮ ವರ್ಷದ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ (ಎಂ.ವಿ.ಎ), ಪ್ರವೇಶಾತಿಗಾಗಿ ಚಿತ್ರಕಲೆ, ಗ್ರಾಫಿಕ್ಸ್ ವಿಭಾಗ ಮತ್ತು ಶಿಲ್ಪಕಲೆ ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 30 ಅಂತಿಮ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವ್ಯಯಕ್ತಿಕ ಸಂದರ್ಶನದ ದಿನಾಂಕ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ಗೆ ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಂಸ್ಥೆಯ ಡೀನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.