Breaking News

ಆ.25 ರಂದುಕೊಪ್ಪಳದಲ್ಲಿವಾಕ್ಇನ್ಇಂಟರ್ವ್ಯೂವ

Walk-in interview in Koppal on August 25th

ಜಾಹೀರಾತು


ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್ವ್ಯೂವನ್ನು ಆ. 25 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
 ಈ ವಾಕ್ ಇನ್ ಇಂಟರ್ವ್ಯೂವದಲ್ಲಿ ಖಾಸಗಿ ಸಂಸ್ಥೆಗಳು ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಅಥವಾ ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
 ಈ ವಾಕ್ ಇನ್ ಇಂಟರ್ವ್ಯೂವದಲ್ಲಿ ಭಾಗವಹಿಸುವ ಆಸಕ್ತಿಯುಳ್ಳ 18 ರಿಂದ 35 ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜುಮ್) ಹಾಗೂ 2 ಪಾಸ್ ಪೋರ್ಟ ಅಳತೆಯ ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.