Dedication program of the Tungabhadra Aarti Mahotsav Bagina on August 26th

ಕೊಪ್ಪಳ ಆಗಸ್ಟ್ 22 (ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ತುಂಗಭದ್ರ ಆರತಿ ಮಹೋತ್ಸವ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಆ. 26 ರಂದು ಸಂಜೆ 6.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಉದ್ಘಾಟಿಸುವರು, ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರು ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಮಲಿಂಗಾರೆಡ್ಡಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು.
ರಾ.ಬ.ಕೊ.ವಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ, ಹುಲಿಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೀಲಮ್ಮ ಗವಿಸಿದ್ದಪ್ಪ ಗುಂಗಾಡಿ ಅವರು ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಬೆಂಗಳೂರು ಕಂದಾಯ ಇಲಾಖೆ (ಧಾರ್ಮಿಕ ದತ್ತಿ ಇಲಾಖೆ) ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್ ಕಟಾರಿಯ, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಡಾ. ಎಂ.ವಿ.ವೆಂಕಟೇಶ, ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೆಗೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಅವರು ಭಾಗವಹಿಸುವರು.
ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರು ಹಾಗೂ ಗ್ರಾಮಸ್ಥರು, ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಯಂ.ಹೆಚ್. ಪ್ರಕಾಶ್ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka
