Breaking News

ನಡೆಯದಂತೆ ಮುಂಜಾಗ್ರತೆ ವಹಿಸಬೇಕು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

—-
ಕೊಪ್ಪಳ ಆಗಸ್ಟ್ 22 (ಕರ್ನಾಟಕ ವಾರ್ತೆ): ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಮುಂಜಾಗ್ರತೆವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
 ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಕಂದಾಯ, ಪೊಲೀಸ್, ಜೆಸ್ಕಾಂ, ಅರಣ್ಯ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
 ರಸ್ತೆಗಳಲ್ಲಿ ಎಲ್ಲಾಕಡೆ ಬೀದಿ ದೀಪಗಳನ್ನು ಅಳವಡಿಸಬೇಕು ಮತ್ತು ಅವಶ್ಯಕತೆ ಇರುವಲ್ಲಿ ಸಿಸಿಟಿವಿಗಳನ್ನು ಹಾಕಬೇಕು. ಜೆಸ್ಕಾಂ ಅಧಿಕಾರಿಗಳು ಲೋ ಲೈನ್ ಹ್ಯಾಂಗಿಂಗ್ ವಯರುಗಳಿದ್ದರೆ ಅವುಗಳನ್ನು ಸರಿಪಡಿಸಬೇಕು. ಗಣಪತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಶ್ಯಾಟ ಸರ್ಕೂಟ್ ಆಗದಂತೆ ಪ್ರತಿಷ್ಠಾಪನಾ ಮಂಡಳಿಯರಿಗೆ ಈ ಕುರಿತು ಮುಂಜಾಗ್ರತೆವಹಿಸುವಂತೆ ಅಧಿಕಾರಿಗಳು ತಿಳಿಸಬೇಕು. ಜಿಲ್ಲೆಯ ಆಯಾ ತಾಲ್ಲೂಕಿನ ತಹಶಿಲ್ದಾರರು ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ಹಂತಗಳಲ್ಲಿ ಈ ಕುರಿತು ಸಭೆಗಳನ್ನು ನಡೆಸಬೇಕೆಂದು ಹೇಳಿದರು.
 ಯಾವುದೇ ಸಮಸ್ಯೆಗಳಿದ್ದರೆ ತಕ್ಷಣ ತಮ್ಮ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ತಹಶಿಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಜೆಸ್ಕಾಂ, ಅಗ್ನಿ ಶ್ಯಾಮಕದಳ, ಅರಣ್ಯ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ತಮಗೆ ವಹಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದರು.
 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿ, ಗಣಪತಿ ವಿಸರ್ಜನಾ ಸ್ಥಳಗಳಾದ ದಾಸನಾಳ ಬ್ರಜ್, ಕೊಪ್ಪಳದ ಹುಲಿಕೆರಿ ಸೇರಿದಂತೆ ಇತರೆ ಸ್ಥಳಗಳಲ್ಲಿ ಬ್ಯಾರಿಕೇಡ್ ಹಾಕುವುದರ ಜೊತೆಗೆ ಲೈಟಿಂಗ್ ವ್ಯವಸ್ಥೆ ಮತ್ತು ಸಿಸಿಟಿವಿ ಅಳವಡಿಸಬೇಕು. ಅಧಿಕಾರಿಗಳು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಯಾವುದೇ ಮಾಹಿತಿಗಳಿದ್ದರೆ ನಮ್ಮ ಪೊಲೀಸರ ಗಮನಕ್ಕೆ ತರಬೇಕು. ಗಣೇಶ ದರ್ಶನಕ್ಕಾಗಿ ಬರುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದರ ಜೊತೆಗೆ ಪೊಲೀಸ್ ಅಧಿಕಾರಿಗಳು ತಮ್ಮ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಹೇಳಿದರು.
 ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್. ಹೇಮಂತಕುಮಾರ್. ಸಹಾಯಕ ಆಯುಕ್ತರಾದ ಕ್ಯಾ. ಮಹೇಶ್ ಮಾಲಗಿತ್ತಿ. ಡಿವೈಎಸ್ಪಿಗಳಾದ ಮುತ್ತಣ್ಣ ಸವರಗೋಳ. ಸಿದ್ದನಗೌಡ ಪಾಟೀಲ್. ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶಿಲ್ದಾರರು. ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು. ನಗರ ಸ್ಥಳೀಯ ಸಂಸ್ಥೆ ಮತ್ತು ಪರಿಸರ ಹಾಗೂ ಅರಣ್ಯ. ಪೊಲೀಸ್ ಇಲಾಖೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು

About Mallikarjun

Check Also

b5ba5169 c426 4bb3 ace3 596be847c8db

ಮಹಿಳೆಯರು ಉಚಿತ ಕಾನೂನು ಸೇವೆ ಪಡೆಯಿರಿ- ನ್ಯಾ. ಮಹಾಂತೇಶ ದರಗದ್

Women should get free legal services – Justice Mahantesh Dargad ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.