Breaking News

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ನೋಂದಣಿ

Koppal District Building and Other Construction Workers Association Registration

Screenshot 2025 08 24 20 39 05 36 E307a3f9df9f380ebaf106e1dc980bb68228317457709427833 1024x443

ಗಂಗಾವತಿ: ಹಿರಿಯ ಕಾರ್ಮಿಕ ಹೋರಾಟಗಾರ ಭಾರಧ್ವಾಜ್ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಸ್ಥಾಪನೆಗೊಂಡು ಕಲಬುರ್ಗಿ ಪ್ರಾದೇಶಿಕ ಕಛೇರಿಯ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿಯಿಂದ ನೋಂದಣಿಯಾಗಿ ಅಸ್ತಿತ್ವಕ್ಕೆ ಬಂದಿದೆ ಎಂದು ಸಂಘದ ಅಧ್ಯಕ್ಷರಾದ ಇಬ್ರಾಹಿಂ ಮೇಸ್ತಿç ತಿಳಿಸಿದರು.
ಸಂಘದ ನೋಂದಣಿ ಸಂಖ್ಯೆ:  ALCKAL/TU/P-61002072/2025-26    ಆಗಿದ್ದು, ಇದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಸ್ಥಾಪನೆಗೊಂಡು, ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಲಿದೆ. ಈ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಮುಂದಿನ ತಿಂಗಳು ಸೆಪ್ಟೆಂಬರ್-೨೮ ರಂದು ನಗರದ ರಾಯಚೂರು ರಸ್ತೆಯಲ್ಲಿರುವ ಆಟೋನಗರದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಹನುಮಂತ ಚೌಡಪ್ಪ, ಪ್ರಧಾನ ಕಾರ್ಯದರ್ಶಿಯಾದ ಮಹೆಬೂಬಸಾಬ ಲಾಠಿ, ಜಂಟಿ ಕಾರ್ಯದರ್ಶಿಯಾದ ಚಾಂದಪಾಷಾ, ಸಂಘಟನಾ ಕಾರ್ಯದರ್ಶಿ ಮರಿಸ್ವಾಮಿ, ಸಿಕಂದರ್, ಸಹಕೋಶಾಧ್ಯಕ್ಷರಾದ ರಸೂಲ್, ಸದಸ್ಯರಾದ ಜಗದೀಶ ಮೇಸ್ತಿç ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
Screenshot 2025 08 24 20 39 05 36 E307a3f9df9f380ebaf106e1dc980bb66101240765621061811 1024x443

About Mallikarjun

Check Also

screenshot 2025 10 09 18 37 46 40 e307a3f9df9f380ebaf106e1dc980bb6.jpg

ಕರ್ನಾಟಕ ಇತಿಹಾಸ ಅಕಾಡೆಮಿ ಪ್ರಶಸ್ತಿಗಳು ಪ್ರಕಟ, ಡಾ. ಶರಣಬಸಪ್ಪ ಕೋಲ್ಕಾರ ಸಂಶೋಧನಾ ಶ್ರೀ ಪ್ರಶಸ್ತಿ ಗೆ ಭಾಜನ  

Karnataka Itihasa Academy Awards announced, Dr. Sharanabasappa Kolkara Research Award conferred ಬೆಂಗಳೂರು:  ಕರ್ನಾಟಕ ಇತಿಹಾಸ ಅಕಾಡೆಮಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.