Crop loss due to natural disaster: Instructions to file a complaint on toll free number
ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಹಾಗೂ ಸ್ಥಳ ನಿರ್ದಿಷ್ಟ ವಿಕೋಪಗಳಿಂದ ಬೆಳೆ ನಷ್ಟವಾದಲ್ಲಿ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಕಟಾವು ಕೈಗೊಳ್ಳುವ ಎರಡು ವಾರದೊಳಗಾಗಿ ಚಂಡಮಾರುತ ಸಹಿತ ಮಳೆ ಅಥವಾ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ರೈತರು ನೇರವಾಗಿ ವಿಮಾ ಸಂಸ್ಥೆಯ ಟೋಲ್ ಫ್ರೀ ಸಂಖ್ಯೆ 18002093536 ಗೆ ಕರೆ ಮಾಡಿ ದೂರು ಸಲ್ಲಿಸಬಹುದು. ಅದೇ ರೀತಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಿಂದ ಅತಿಯಾದ ಮಳೆ, ಬೆಳೆ ಮುಳುಗಡೆ, ಆಲಿಕಲ್ಲು ಮಳೆ, ಭೂ ಕುಸಿತ ಇಂತಹ ಅವಘಡಗಳಿಂದ ಬೆಳೆ ನಷ್ಟವಾದರೆ ಅವಘಡ ಸಂಭವಿಸಿದ 72 ಗಂಟೆಯೊಳಗಾಗಿ ರೈತರು TATA AIG ವಿಮಾ ಸಂಸ್ಥೆಯ ಟೋಲ್ ಫ್ರೀ ಸಂಖ್ಯೆ 18002093536 ಗೆ ಕರೆ ಮಾಡಿ ದೂರು ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.