Koppal District Police Complaints Authority: Applications invited for the post of Member

ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದಲ್ಲಿ ಖಾಲಿ ಇರುವ ನಾಗರೀಕ ಸಮಾಜದ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಮ್ಮ ಹೆಸರು ಮತ್ತು ವೈಯಕ್ತಿಕ ಮಾಹಿತಿಯೊಂದಿಗೆ 15 ದಿನಗಳೊಳಗಾಗಿ ಅರ್ಜಿಯನ್ನು ಜಿಲ್ಲಾ ಪೊಲೀಸ್ ಕಛೇರಿಗೆ ಖುದ್ದಾಗಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಡಾ.ರಾಮ್ ಎಲ್.ಅರಸಿದ್ದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.