Breaking News

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ಅರ್ಜಿ ಆಹ್ವಾನ

Applications invited for the post of Rural Rehabilitation Worker

ಜಾಹೀರಾತು

ಕೊಪ್ಪಳ ಆಗಸ್ಟ್ 26 (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವ್ಯಾಪ್ತಿಯ ಜಿಲ್ಲೆಯ ಕುಕನೂರು ತಾಲೂಕಿನ ಮಂಡಲಗೇರಿ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ತಾತ್ಕಾಲಿಕವಾಗಿ ಮಾಸಿಕ ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.10,000/- ಗಳ ಗೌರವಧನವನ್ನು ನೀಡಲಾಗುವುದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆದು ಆಗಸ್ಟ್ 28 ರಿಂದ ಸೆಪ್ಟೆಂಬರ್ 6 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ, ಕೊಠಡಿ ಸಂಖ್ಯೆ 31,32 ಜಿಯೋ ಪೆಟ್ರೋಲ್ ಬಂಕ್ ಎದುರುಗಡೆ, ಹೊಸಪೇಟೆ ರಸ್ತೆ, ಕೊಪ್ಪಳ ರವರಿಗೆ ಕಛೇರಿ ಅವಧಿಯಲ್ಲಿ ಸಲ್ಲಿಸಬೇಕು. ಹುದ್ದೆಯು ಸಂಪೂರ್ಣವಾಗಿ ಗೌರವಧನದ ಆಧಾರದ ಮೇಲೆ ಹಾಗೂ ತಾತ್ಕಾಲಿಕ ಹುದ್ದೆಯಾಗಿರುತ್ತದೆ. ನಿಗದಿಪಡಿಸಿದ ದಿನಾಂಕದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18-45 ವರ್ಷ ಒಳಗಿನ ನಿರುದ್ಯೋಗಿ ಅಂಗವಿಕಲರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು. ಜೊತೆಗೆ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಿಶೇಷ ಶಿಕ್ಷಣ, ಆರ್ ಸಿ ಐ ತರಬೇತಿ, ದಿವ್ಯಾಂಗ ಮಿತ್ರ ತರಬೇತಿ, ಸಜ್ಞೆ ಭಾಷೆ ತರಬೇತಿ, ದೈಹಿಕ ವ್ಯಾಯಾಮ ತರಬೇತಿ ವಿಶೇಷ ಜ್ಞಾನಗಳನ್ನು ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿಯನ್ನು (ಯು.ಡಿ.ಐ.ಡಿ) ಕಡ್ಡಾಯವಾಗಿ ಹೊಂದಿದವರಾಗಿರಬೇಕು. ಅಂಗವಿಕಲತೆಯು ಕನಿಷ್ಠ ಶೇ.40 ರಷ್ಟಿರಬೇಕು. (ಭಾಗಶ: ಅಂಧರಿಗೆ, ಭಾಗಶ: ಶ್ರವಣ ದೋಷವುಳ್ಳವರಿಗೆ ಮತ್ತು ದೈಹಿಕ ಅಂಗವಿಕಲರಿಗೆ). ಮಂಡಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. (ಗ್ರಾಮ ಪಂಚಾಯತಿ ದೃಢೀಕರಣ), ತಹಶೀಲ್ದಾರರಿಂದ ಪಡೆದ ಜಾತಿ, ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ವಿಕಲಚೇತನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಅನುಭವವಿದ್ದಲ್ಲಿ ಸಂಬAಧಪಟ್ಟ ದಾಖಲೆಗಳನ್ನು ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕುಕನೂರು ತಾಲೂಕಿನ ಎಂ.ಆರ್.ಡಬ್ಲೂö್ಯ(ಪ್ರ) ಶರಣಯ್ಯ ದೂ:9886240203 ಹಾಗೂ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ:08539-295496 ಅಥವಾ ಕಛೇರಿ ಅವಧಿಯಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.