Breaking News

ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ

Entrepreneurship Training: Call for Applications

ಕೊಪ್ಪಳ ಆಗಸ್ಟ್ 26 (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕೊಪ್ಪಳ ಇವರು ಸ್ವಯಂ ಉದ್ಯೋಗ ಪ್ರಾರಂಭಿಸುವ ನಿರುದ್ಯೋಗ ಯುವಕ ಯುವತಿಯರಿಗೆ ಮತ್ತು ಉದ್ಯಮ ಆಕಾಂಕ್ಷಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹೀರಾತು ಮತ್ತು ಮಾರುಕಟ್ಟೆಯ ಕುರಿತು ನೋಂದಣಿ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಕೊಪ್ಪಳ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18 ವರ್ಷ ರಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತರು ಸೆಪ್ಟೆಂಬರ್ 4 ರೊಳಗಾಗಿ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕೊಪ್ಪಳ ಆವರಣ, ನಗರಸಭೆ ಎದುರುಗಡೆ ಇಲ್ಲಿಗೆ ಸಲ್ಲಿಸಬೇಕು.
ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ರೇಶನ್ ಕಾರ್ಡ್ಗಳ ಝರಾಕ್ಸ್ ಪ್ರತಿಗಳು, 2 ಪಾಸ್‌ಪೋರ್ಟ್ ಫೋಟೋಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 6362557332/7204016012 ಈ ನಂಬರಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.