Breaking News

ಬಿಡುಗಡೆ ಮಾಡಿ ಯಾವುದೇ ಜಾತಿ / ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ ಮತ್ತು ಸೂಚನೆಗಳು ಇದ್ದಲ್ಲಿ 7 ದಿನಗಳ ಒಳಗೆ ನೀಡಲು ತಿಳಿಸಲಾಗಿದೆ

If any caste/subcaste is left behind after the release, suggestions and instructions regarding such aspects have been asked to be provided within 7 days.

 

ಬೆಂಗಳೂರು:  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ.

ಜಾಹೀರಾತು

ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ / ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ 2025, ಆಗಸ್ಟ್‌ 22 ರಂದು ಮಾಧ್ಯಮಗಳಿಗೆ ಸುದ್ದಿ ಬಿಡುಗಡೆ ಮಾಡಿ ಯಾವುದೇ ಜಾತಿ / ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ ಮತ್ತು ಸೂಚನೆಗಳು ಇದ್ದಲ್ಲಿ 7 ದಿನಗಳ ಒಳಗೆ ನೀಡಲು ಕೋರಲಾಗಿತ್ತು.

ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ / ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು 2025ರ ಸೆಪ್ಟೆಂಬರ್‌ 1ರ ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.

ಸಾರ್ವಜನಿಕರು ತಮ್ಮ ಸಲಹೆ / ಸೂಚನೆ / ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ, ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ.

ಹೆಚ್ಚಿನ‌ ವಿವರಗಳಿಗೆ 080-29506668 ಸಂಪರ್ಕಿಸಬಹುದು.

  • ಕರ್ನಾಟಕ ಸರಕಾರ ವಾರ್ತಾ ಇಲಾಖೆ

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.