Breaking News

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

Applications invited for selection for Mahatma Gandhi Seva Award Karnataka


ಕೊಪ್ಪಳ ಆಗಸ್ಟ್ 30 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
 ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.
 ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.
 ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ ವಿಳಾಸ informationdiprawards@gmail.com ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.