Breaking News

ಮಹಿಳೆ ಕಾಣೆ: ಪತ್ತೆಗೆ ಸಹಕರಿಸಲು ಮನವಿ

Woman missing: Request for assistance in finding her
Screenshot 2025 08 30 17 53 31 57 E307a3f9df9f380ebaf106e1dc980bb65252061338213889911


ಕೊಪ್ಪಳ ಆಗಸ್ಟ್ 30 (ಕರ್ನಾಟಕ ವಾರ್ತೆ): ಜಿಲ್ಲೆಯ ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪಾ ಗ್ರಾಮದ ನಿವಾಸಿ 30 ವರ್ಷದ ಸಂಗೀತಾ ಗಂಡ ಶಿವಶರಣಪ್ಪ ನಾಯಕ ಎಂಬ ಮಹಿಳೆ 2025ರ ಆಗಸ್ಟ್ 13 ರಿಂದ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸುವಂತೆ ಕುಷ್ಟಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
 ಸಂಗೀತಾ ಗಂಡ ಶಿವಶರಣಪ್ಪ ನಾಯಕ ಎಂಬ ಮಹಿಳೆಯು ಆ. 13ರಂದು ಬೆಳಿಗ್ಗೆ 8.45 ಗಂಟೆಯ ಸುಮಾರಿಗೆ ಮನೆಯಿಂದ ಹೋದವಳು ಈ ವರೆಗೂ ಪತ್ತೆಯಾಗಿರುವುದಿಲ್ಲ ಎಂದು ಕುಟುಂಬಸ್ಥರು ದೂರು ನೀಡಿದ್ದು, ಈ ಬಗ್ಗೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ:200/2025, ಕಲಂ 00ಎಂಪಿ ಭಾರತೀಯ ನ್ಯಾಯ ಸಂಹಿತೆ-2023 ಮಹಿಳೆ ಕಾಣೆ ರೀತ್ಯ ಪ್ರಕರಣ ದಾಖಲಾಗಿದೆ.
 ಕಾಣೆಯಾದ ಮಹಿಳೆಯು 5 ಅಡಿ ಎತ್ತರ, ದುಂಡು ಮುಖ, ಕೆಂಪು ಮೈ ಬಣ್ಣ, ಸಾದಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದಾಗ ಬಿಳಿ ಬಣ್ಣದ ಹೂವಿನ ಮತ್ತು ಕಾಫಿ ಬಣ್ಣದ ಚೂಡಿದಾರ ವೇಲು ಧರಿಸಿದ್ದಳು. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ಈ ಚಹರೆಯ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ಮಾಹಿತಿ ದೊರೆತಲ್ಲಿ ಕುಷ್ಟಗಿ ಪೋಲಿಸ್ ಠಾಣೆ ಸಿ.ಪಿ.ಐ ದೂ.ಸಂ: 9480803732, ಕುಷ್ಟಗಿ ಪೋಲಿಸ್ ಠಾಣೆ ಪಿ.ಎಸ್.ಐ ದೂ.ಸಂ: 9480803757, ಗಂಗಾವತಿ ಡಿ.ಎಸ್.ಪಿ ದೂ.ಸಂ: 9480803721 ಹಾಗೂ ಕೊಪ್ಪಳ ಎಸ್‌ಪಿ ಕಛೇರಿ ಸಂಖ್ಯೆ: 08539-230111 ಗೆ ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಕುಷ್ಟಗಿ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
****

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.