Formation of an internal grievance committee is mandatory in commercial establishments, industries & factories.
ಕೊಪ್ಪಳ ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕಿರುಗಳ ತಡೆ ಅಧಿನಿಯಮ-2013ರನ್ವಯ ಕೊಪ್ಪಳ ಜಿಲ್ಲೆಯ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು & ಕಾರ್ಖಾನೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಾಗಿದೆ ಎಂದು ಕೊಪ್ಪಳ ಉಪವಿಭಾಗದ ಕಾರ್ಮಿಕ ಅಧಿಕಾರಿ ಸುಧಾ ಎಸ್. ಗರಗ ಅವರು ತಿಳಿಸಿದ್ದಾರೆ.
ಮಾನ್ಯ ಸರ್ವೋಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳಲ್ಲಿ 10 ಅಥವಾ 10ಕ್ಕಿಂತ ಹೆಚ್ಚು ಮಹಿಳಾ ಕಾರ್ಮಿಕರನ್ನು ಹೊಂದಿರುವ ಎಲ್ಲಾ ಪ್ರತಿ ಸಂಸ್ಥೆಗಳು ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಟ್ಟುವಿಕ, ನಿಷೇಧಿಸುವಿಕೆ, ಮತ್ತು ನಿವಾರಿಸುವಿಕೆ ಅಧಿನಿಯಮ-2013 ನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಸೆಕ್ಷನ್-4 ರನ್ವಯ “ಆಂತರಿಕ ದೂರು ಸಮಿತಿ” ರಚನೆ ಮಾಡುವುದು ಕಡ್ಡಾಯವಾಗಿರುವುದರಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳು ಪ್ರತಿ ಸಂಸ್ಥೆಗಳ ಮಾಲೀಕರು ತಮ್ಮ ಸಂಸ್ಥೆಯಲ್ಲಿ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಟ್ಟುವಿಕ, ನಿಷೇಧಿಸುವಿಕೆ, ಮತ್ತು ನಿವಾರಿಸುವಿಕೆ ಅಧಿನಿಯಮ-2013 ನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಸೆಕ್ಷನ್-4 ರನ್ವಯ “ಆಂತರಿಕ ದೂರು ಸಮಿತಿ”ಯನ್ನು ರಚಿಸಿ ಆದೇಶ ಪ್ರತಿಯನ್ನು ಮಾನ್ಯ ಜಿಲ್ಲಾಧಿಕಾರಿಗಳು ಕೊಪ್ಪಳ ಹಾಗೂ ಜಿಲ್ಲಾಕಾರ್ಮಿಕ ಅಧಿಕಾರಿಗಳು, ಜಿಲ್ಲಾಡಳಿತ ಭವನ ಹೊಸಪೇಟೆ ರಸ್ತೆ ಕೊಪ್ಪಳ ರವರ ಕಛೇರಿಗೆ ಸಲ್ಲಿಸಬೇಕು ಎಂದು ಕಾರ್ಮಿಕ ಅಧಿಕಾರಿಗಳ ಕಛೇರಿಯ ಪ್ರಕಟಣೆ ತಿಳಿಸಿದೆ.