Breaking News

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ನವೋದ್ಯಮ ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ

Minority Development Corporation: Applications invited from those interested in starting a new business

ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಯುವಕರು ಹಾಗೂ ಯುವತಿಯರಿಗೆ ನವೋದ್ಯಮಗಳನ್ನು  ಪ್ರಾರಂಭಿಸಲು ಉತ್ತೇಜನ ನೀಡುವ ಉದ್ದೇಶದಿಂದ  “Elevate (Minorities) 2025”  ಯೋಜನೆಯನ್ನು ಜಾರಿಗೆ ತಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯನ್ನು ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಜಿದಾರರು ಅಧಿಕೃತ ವೆಬ್‌ಸೈಟ್  eitbt.karnataka.gov.in     ಮುಖಾಂತರ ಸೆಪ್ಟೆಂಬರ್ 15 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22231007 ಗೆ ಸಂಪರ್ಕಿಸಬಹುದು ಅಥವಾ  elevate-ktech@ka.gov.in      ಗೆ ಇ-ಮೇಲ್ ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

screenshot 2025 11 25 19 57 14 62 e307a3f9df9f380ebaf106e1dc980bb6.jpg

ವಿದ್ಯಾರ್ಥಿ ಮೇಲೆ ಹಲ್ಲೆ:  ಶಾಲೆಯ ವಿರುದ್ಧ ಪೊಲೀಸ್, ಮಕ್ಕಳ ಆಯೋಗಕ್ಕೆ ದೂರು

ವಿದ್ಯಾರ್ಥಿ ಮೇಲೆ ಹಲ್ಲೆ: ಶಾಲೆಯ ವಿರುದ್ಧ ಪೊಲೀಸ್, ಮಕ್ಕಳ ಆಯೋಗಕ್ಕೆ ದೂರು Student assaulted: Complaint filed against school, …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.