Publication of provisional selection list for various posts: Objections invited
ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಎನ್.ಹೆಚ್.ಎಂ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಸಾಮಾನ್ಯ ಅರ್ಹತಾ ಪಟ್ಟಿ ಮತ್ತು ತಿರಸ್ಕೃತ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿನ ಎನ್.ಟಿ.ಸಿ.ಪಿ. ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಜಿಲ್ಲಾ ಸಲಹೆಗಾರರ ಹುದ್ದೆ ಮತ್ತು ಐ.ಡಿ.ಎಸ್.ಪಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಜಿಲ್ಲಾ ಎಪಿಡೆಮಿಯೋಲಾಜಿಸ್ಟ್ ಹುದ್ದೆ ಹಾಗೂ ತಾಲ್ಲೂಕು ಎಪಿಡೆಮಿಯೋಲಾಜಿಸ್ಟ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳು, ಸಾಮಾನ್ಯ ಅರ್ಹತಾ ಪಟ್ಟಿಗಳು ಮತ್ತು ತಿರಸ್ಕೃತ ಪಟ್ಟಿಗಳನ್ನು ಕಛೇರಿಯ ಸೂಚನಾ ಫಲಕಕ್ಕೆ ಹಾಗೂ ಕೊಪ್ಪಳ ಜಿಲ್ಲಾ ವೆಬ್‌ತಾಣ www.koppal.nic.in ದಲ್ಲಿ ಪ್ರಕಟಿಸಲಾಗಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 3 ರಿಂದ 9 ರವರೆಗೆ ಕಛೇರಿಯ ಸಮಯದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, 1ನೇ ಮಹಡಿ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇಲ್ಲಿಗೆ ಅಭ್ಯರ್ಥಿಗಳು ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ನಂತರ ಬಂದAತಹ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.