Stay strong with nutritious food and a healthy lifestyle: Justice Mahantesh Dargada

ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಎಲ್ಲರೂ ಸದೃಢರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಹೇಳಿದರು.
ಮಂಗಳವಾರದAದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಕೊಪ್ಪಳ ನಗರದ ದೇವರಾಜ ಅರಸ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪೌಷ್ಟಿಕ ಆಹಾರ ದಿನ ಹಾಗೂ ಪೌಷ್ಟಿಕ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೌಷ್ಟಿಕ ಆಹಾರ ಹಾಗೂ ಉತ್ತಮ ಜೀವನ ಶೈಲಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಮುಖ್ಯವಾಗಿ ಎಲ್ಲಾ ಗರ್ಭಿಣಿ, ಬಾಣಂತಿಯರು ಆರೋಗ್ಯಕರ ಮಗುವಿಗೆ ಜನ್ಮ ನೀಡುವಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪರಶುರಾಮ ಶೆಟ್ಟೆಪ್ಪನವರ, ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೋಟಗಾರ, ಗರ್ಭಿಣಿ, ಬಾಣಂತಿಯರು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಲಯದ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು