All India Women's Cultural Organization holds massive protest to protect women's rights

ಕೊಪ್ಪಳ.. ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ. ವರದಕ್ಷಿಣೆ ಕಿರುಕುಳ. ಅತ್ಯಾಚಾರ ಕೊಲೆ ಖಂಡಿಸಿ ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಕೊಪ್ಪಳದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಕಾರ್ಯಕರ್ತರು ಅಶೋಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಜಿಲ್ಲಾ ಕಾರ್ಯದರ್ಶಿ ಶಾರದಾ ಮಾತನಾಡಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ದೇಶ ವ್ಯಾಪಿ ಮಹಿಳೆಯರ ಹಕ್ಕು ಬಾಧ್ಯತೆಗಳ ರಕ್ಷಣೆಗಾಗಿ ಪ್ರತಿಭಟನೆ ನಡೆಸುವುದರ ಮೂಲಕ ಸರ್ಕಾರದ ಗಮನ ಸೆಳೆಯುವುದಾಗಿದೆ. ಮಹಿಳೆಯರ ಶೋಷಣೆ ಬ್ರೋಣ ಹತ್ಯೆಯಿಂದ ಆರಂಭಗೊಂಡು ವಯೋ ವೃದ್ಧ ಮಹಿಳೆಯರವರಿಗೆ ದೌರ್ಜನ್ಯ ನಡೆಯುತ್ತಿರುವುದು ಕಾಣಬಹುದಾಗಿದೆ. ಮಗನಿಂದ ತಾಯಿಯ ಕೊಲೆ. ಪ್ರೀತಿ ಪ್ರೇಮ ಹೆಸರಿನಲ್ಲಿ ಯುವತಿಯರ ಕಗ್ಗೊಲೆ ಹೀಗೆ ಮಹಿಳೆಯರ ಶೋಷಣೆಯ ಪ್ರಕರಣಗಳು ದಿನದಿಂದ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಮಹಿಳೆಯರ ರಕ್ಷಣೆಗಾಗಿ ಹಾಗೂ ಹಕ್ಕು ಬಾಧ್ಯತೆಗಳನ್ನು ಉಳಿಸಿ ಬೆಳೆಸುವಲ್ಲಿ ಸರ್ಕಾರ ಸೂಕ್ತ ಕಾನೂನು ಕ್ರಮಗಳನ್ನು ಜರಿಗಿಸಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ಭವ್ಯ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು