ನವಿಲುಗರಿ ನವೀನ್‌ಗೆ ‘ಭರ್ಜರಿ’ ಚೇತನ್‌ಕುಮಾರ್ ಸಾಥ್

Bharjari' Chetankumar Saath for Navilugari Naveen

ಬೆಂಗಳೂರು: ವಿಭಿನ್ನ ಮತ್ತು ವಿಶಿಷ್ಟ ಸಿನಿಮಾಗಳನ್ನು ನಿರ್ದೇಶನ ಮಾಡುವ ಮೂಲಕ ಹಾಗೂ ನ್ಯಾಷನಲ್, ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಗಳನ್ನು ಮಾಡಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ನಿರ್ದೇಶಕ ನವಿಲುಗರಿ ನವೀನ್ ಪಿ ಬಿ ಗೆ ಹಲವಾರು ಹಿಟ್ ಹಾಡುಗಳಿಗೆ ಸಾಹಿತ್ಯ ಬರೆದಿರುವ ಚೇತನ್‌ಕುಮಾರ್ ಈಗ ಸಾಥ್ ನೀಡಿದ್ದಾರೆ.
ಸದ್ಯ “ಜನರಿಂದ ನಾನು ಮೇಲೆ ಬಂದೆ ”ೆ ಎಂಬ ಸಿನಿಮಾ ನಿರ್ದೇಶನದಲ್ಲಿ ಬಿಜಿಯಾಗಿರುವ ನವೀನ್ ಈ ಬಿಜಿಯ ನಡುವೆ ಮತ್ತೊಂದು ಸಿನಿಮಾ ನಿರ್ದೇಶನ ಮಾಡಲು ಸಜ್ಜಾಗುತ್ತಿದ್ದಾರೆ. ಈ ನೂತನ ಚಲನಚಿತ್ರಕ್ಕೆ ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್, ಸಿನಿಮಾಗಳ ನಿರ್ದೇಶಕ ಹಾಗೂ ಏನಮ್ಮೀ ಏನಮ್ಮೀ, ಶಾನೇ ಟಾಪ್ ಆಗವ್ಳೆ, ಪಸಂದಾಗವ್ನೆ ಇನ್ನೂ ಮುಂತಾದ ಹಿಟ್ ಹಾಡುಗಳಿಗೆ ಸಾಹಿತ್ಯ ಬರೆದಿರುವ ಚೇತನ್‌ಕುಮಾರ್ ನವಿಲುಗರಿ ನವೀನ್ ಪಿ ಬಿ ಅವರಿಗೆ ಸಾಥ್ ನೀಡಿದ್ದಾರೆ. ಈ ಹೊಸ ಚಿತ್ರದಲ್ಲಿರುವ ಒಂದು ರೋಮ್ಯಾಂಟಿಕ್ ಗೀತೆಗೆ ಸಾಹಿತ್ಯವನ್ನು ಬರೆಯುತ್ತಿದ್ದು ಈ ಹಾಡು ಕೂಡ ಭರ್ಜರಿ ಚೇತನ್‌ಕುಮಾರ್ ಅವರ ಹಿಟ್ ಹಾಡುಗಳ ಸಾಲಿಗೆ ಸೇರಲಿದೆ. ಈ ಚಿತ್ರಕ್ಕೆ ಯುವ ಸಂಗೀತ ನಿರ್ದೇಶಕ ಪ್ರಣವ್ ಸತೀಶ್ ಅವರ ಸಂಗೀತ ನಿರ್ದೇಶನ ,ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ ಅವರ ಪತ್ರಿಕಾ ಸಂಪರ್ಕವಿದೆ.
“ಜನರಿಂದ ನಾನು ಮೇಲೆ ಬಂದೆ” ಸಿನಿಮಾದ ಕೆಲಸ ಕಾರ್ಯಗಳು ಕೊನೆಯ ಹಂತದಲ್ಲಿದ್ದು ಕೆಲಸ ಮುಗಿದೊಡನೆ ಹೊಸ ಸಿನಿಮಾದ ಟೈಟಲ್ ಅನ್ನು ನಾಡಿನ ಗಣ್ಯರ ಅಮೃತ ಹಸ್ತದಿಂದ ಬಿಡುಗಡೆ ಮಾಡಿಸಲಾಗುವುದು ಎಂದು ನವೀನ್ ಪಿ.ಬಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago