Celebrate Kalyana Karnataka Utsav Day in a dignified manner: Deputy Commissioner Dr. Suresh B. Itnal

ಕೊಪ್ಪಳ ಸೆಪ್ಟೆಂಬರ್ 04 (ಕರ್ನಾಟಕ ವಾರ್ತೆ): ಪ್ರತಿ ವರ್ಷದಂತೆ ಈ ವರ್ಷವು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸೆಪ್ಟೆಂಬರ್ 17 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಧ್ವಜಾರೋಹಣವಾದ ನಂತರ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಲಿದ್ದು, ಈ ಕಾರ್ಯಕ್ರಮಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಮಾಡಬೇಕೆಂದು ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ವೇದಿಕೆ ನಿರ್ಮಾಣ, ಪೆಂಡಾಲ ವ್ಯವಸ್ಥೆ ಸರಿಯಾಗಿ ಮಾಡಬೇಕು. ನಗರಸಭೆ ವತಿಯಿಂದ ಕ್ರೀಡಾಂಗಣದ ಸ್ವಚ್ಚತೆ, ಲೈಟಿಂಗ್ ವ್ಯವಸ್ಥೆ ಮತ್ತು ಕಾರ್ಯಕ್ರಮಕ್ಕೆ ಬರುವವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಶಾಲಾ-ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಬಂಧಿಸಿದ ಇಲಾಖೆಯವರು ಚೆನ್ನಾಗಿ ಆಯೋಜನೆ ಮಾಡಬೇಕೆಂದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ದಿನದಂದು ನಗರದ ಎಲ್ಲಾ ಕಡೆ ಲೈಟಿಂಗ್ ವ್ಯವಸ್ಥೆ ಇರುವಂತೆ ನಗರಸಭೆ ಅವರು ನೋಡಿಕೊಳ್ಳಬೇಕು. ಪೊಲೀಸ್ ಇಲಾಖೆ ಸೇರಿದಂತೆ ಎನ್.ಸಿ.ಸಿ., ಎನ್.ಎಸ್.ಎಸ್. ಮಕ್ಕಳು ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಯಾವುದೇ ಅಗ್ನಿ ಅವಗಡ ಸಂಭವಿಸದಂತೆ ನೋಡಿಕೊಳ್ಳಲು ಅಗ್ನಿಶಾಮಕ ದಳದ ವಾಹನವನ್ನು ಜಿಲ್ಲಾ ಕ್ರೀಡಾಂಗಣದ ಹತ್ತಿರ ನಿಲ್ಲಿಸಬೇಕು. ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಹೇಳಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್.ಹೇಮಂತಕುಮಾರ್, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಕೃಷಿ ಇಲಾಖೆಯ ಜಂಟಿ ನಿರ್ದೆಶಕ ರುದ್ರೇಶಪ್ಪ ಟಿ.ಎಸ್., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟಿಲ್, ಕೊಪ್ಪಳ ತಹಶಿಲ್ದಾರ ವೀಠ್ಠಲ್ ಚೌಗಲಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೀಠ್ಠಲ್ ಜಾಬಗೌಡರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಕರ್ಣಕುಮಾರ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ವೇಂಕಟೇಶ ನಾಗನೂರು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.